ಚಿತ್ರದುರ್ಗ:ಕರೊನಾ ಎರಡನೆಯ ಅಲೆಯ ಹೊಡೆತಕ್ಕೆ ದಿನವೊಂದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೋಂಕಿತರಾಗುತ್ತಿರುವುದಲ್ಲದೆ, ದಿನವೊಂದರಲ್ಲೇ ನೂರಾರು ಮಂದಿ ಕೋವಿಡ್ ಸೋಂಕಿನಿಂದಾಗಿ ಮೃತಪಡುತ್ತಿದ್ದರು, ರಾಜ್ಯದಲ್ಲಿ ಕರೊನಾಗೆ ಬಲಿಯಾದವರ ಸಂಖ್ಯೆ ಈಗಾಗಲೇ 20 ಸಾವಿರಕ್ಕೂ ಹೆಚ್ಚಾಗಿದೆ.
ರಾಜ್ಯದಲ್ಲಿ ಪರಿಸ್ಥಿತಿ ಹೀಗಿರುವಾಗ ಆಡಳಿತಾರೂಢ ಬಿಜೆಪಿಯ ಶಾಸಕರೊಬ್ಬರು ‘ಸಾಯುವವನು ಎಲ್ಲಿ ಬೇಕಾದ್ರೂ ಸಾಯಲಿ, ನಾನು ಇಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲ್ಲ’ ಎಂಬುದಾಗಿ ಹಠ ತೊಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳೆಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರಪ್ಪ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಮಗ ಮಾಡಿದ ಆ ಒಂದು ಕೆಲಸ ಅಮ್ಮನನ್ನೂ ಬಲಿ ಪಡೆಯಿತಾ?; ಪತಿ ಸತ್ತ ಕೆಲವೇ ಕ್ಷಣಗಳಲ್ಲಿ ಪತ್ನಿಗೂ ಸಾವು!
ಕ್ಷೇತ್ರದ ಬಿ.ದುರ್ಗದ ನೂತನ ರೆಸಿಡೆನ್ಷಿಯಲ್ ಶಾಲೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಾಡು ಮಾಡುವ ಕುರಿತ ಮಾತುಕತೆ ವೇಳೆ ಚಂದ್ರಪ್ಪ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಆರೋಗ್ಯ ಅಧಿಕಾರಿ ಫಾಲಾಕ್ಷಯ್ಯ ಈ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಸಿಟ್ಟಾದ ಶಾಸಕರು ಅದಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಕೆಎಸ್​ಆರ್​ಟಿಸಿ ಅಧ್ಯಕ್ಷರೂ ಆಗಿರುವ ಶಾಸಕ ಚಂದ್ರಪ್ಪ, ಸಾಯುವವನು ಎಲ್ಲಿ ಬೇಕಾದರೂ ಸಾಯಲಿ. ನಾನು ಇಲ್ಲಿ ಕೋವಿಡ್ ಸೆಂಟರ್ ಮಾಡಲ್ಲ. ನನಗೆ ಅದರ ಅವಶ್ಯಕತೆ ಇಲ್ಲ, ಇಲ್ಲಿ ಆಸ್ಪತ್ರೆ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಒಂದೇ ಮನೆಯ ನಾಲ್ವರು ಕರೊನಾಗೆ ಬಲಿ; 2- 3 ದಿನಗಳ ಅಂತರದಲ್ಲಿ ಇಬ್ಬಿಬ್ಬರ ಸಾವು!

ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + 6 =
Remember me
