ಹೊನ್ನಾಳಿ:ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್​ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ರೇಣುಕಾಚಾರ್ಯ ಹಾಗೂ ಅವರ ಕುಟುಂಬಸ್ಥರು ಚಂದ್ರಶೇಖರ್​ ಅಪಘಾತದಲ್ಲಿ ಮೃತಪಟ್ಟಿಲ್ಲ. ಇದೊಂದು ನಿಯೋಜಿತ ಕೊಲೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲೂ ವರದಿ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿಗೆ ವಹಿಸುವ ಸಾಧ್ಯತೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇಂದು(ಬುಧವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊನ್ನಾಳಿ ಶಾಸಕ ರೇಣುಕಾಚಾರ್ಯರ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಲಿದ್ದಾರೆ. ಈ ವೇಳೆ ಪ್ರಕರಣವನ್ನು ಸಿಐಡಿಗೆ ವಹಿಸುವುದಾಗಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಅ.30ರ ರಾತ್ರಿ ನಾಪತ್ತೆಯಾಗಿದ್ದ ಚಂದ್ರಶೇಖರ್​ ಹೊನ್ನಾಳಿ-ನ್ಯಾಮತಿ ರಸ್ತೆಯ ತುಂಗಾ ಮೇಲ್ದಂಡೆ ನಾಲೆಯಲ್ಲಿ 4 ದಿನದ ಬಳಿಕ ಅಂದರೆ ನ.4ರ ಸಂಜೆ ಶವವಾಗಿ ಪತ್ತೆಯಾಗಿದ್ದರು. ನಾಲೆ ಸೇತುವೆ ಮೇಲೆ ಕಾರಿನ ಬಿಡಿ ಭಾಗಗಳು ಕಾಣಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡಾಗ ಚಂದ್ರಶೇಖರ್​ ಪ್ರಯಾಣಿಸುತ್ತಿದ್ದ ಕಾರು ರಸ್ತೆಯಿಂದ 30 ಅಡಿ ಆಳದ ನಾಲೆಗೆ ಬಿದ್ದಿರುವುದು ಪತ್ತೆಯಾಗಿತ್ತು. ಕ್ರೇನ್​ ಮೂಲಕ ಕಾರನ್ನು ಹೊರತೆಗೆದಾಗ ಕೊಳೆತ ಸ್ಥಿತಿಯಲ್ಲಿ ಕಾರಿನ ಹಿಂದಿನ ಸೀಟಿನಲ್ಲಿ ಚಂದ್ರಶೇಖರ್​ ಮೃತದೇಹ ಪತ್ತೆಯಾಗಿತ್ತು.
ಚಂದ್ರಶೇಖರ್​ ಅವರದು ಆಕಸ್ಮಿಕ ಸಾವಲ್ಲ. ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿ ರೇಣುಕಾಚಾರ್ಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಸುತ್ತ ಹಲವು ಅನುಮಾನಗಳು ಮೂಡಿದ್ದು, ಆಕಸ್ಮಿಕ ಅಪಘಾತವೋ, ಆತ್ಮಹತ್ಯೆಯೋ, ಕೊಲೆಯೋ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.
ರೇಣುಕಾಚಾರ್ಯರ ತಮ್ಮನ ಪುತ್ರ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ… ಕಾರಿನ ಹಿಂಬದಿ ಸೀಟಿನ ರಹಸ್ಯ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
