ಪುಲಕೇಶಿ ನಗರದ ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್​ ಅವರ ಮನೆ ಮೇಲೆ ಕಲ್ಲುತೂರಾಟ ನಡೆಯುತ್ತಿದೆ. ಹಾಗೇ ಕಿಡಿಗೇಡಿಗಳು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಆದರೆ ದುಷ್ಕರ್ಮಿಗಳು ಪೊಲೀಸರ ಮೂರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಶಾಸಕರ ಮನೆಗೂ ಬೆಂಕಿ ಹಚ್ಚಿದ್ದು, ಅಕ್ಕಪಕ್ಕದ ಮನೆಗಳಿಗೂ ತಗುಲಿದೆ. ಇದುವರೆಗೆ ಒಟ್ಟು 50 ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಡಿ.ಜೆ. ಹಳ್ಳಿಯಲ್ಲಿ ಆಟೋ, ಬೈಕ್​, ಕಾರುಗಳ ಗ್ಲಾಸ್​ಗಳು ಪುಡಿಪುಡಿಯಾಗುತ್ತಿವೆ.  ಠಾಣೆಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಿದ್ದಾರೆ. ಕಿಟಕಿಗಳನ್ನು ಒಡೆದುಹಾಕಿದ್ದು, ಪೊಲೀಸರು ಪರಿಸ್ಥಿತಿ  ನಿಭಾಯಿಸಲು ಕಷ್ಟಪಡುತ್ತಿದ್ದಾರೆ. ಈ ಮಧ್ಯೆ ಶಾಸಕ ಅಖಂಡ ಶ್ರೀನಿವಾಸ್​ ಅವರು ಮುಸ್ಲಿಮರಲ್ಲಿ ಶಾಂತಿಯಿಂದ ಇರುವಂತೆ ಮನವಿ ಮಾಡಿದ್ದಾರೆ.
ಯಾರೋ ಕಿಡಿಗೇಡಿಗಳು ಮಾಡಿದ ತಪ್ಪಿಗೆ ನಾವು ಜಗಳ ಮಾಡಿಕೊಳ್ಳುವುದು ಬೇಡ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳೋಣ, ಶಿಕ್ಷೆ ಕೊಡಿಸೋಣ. ನಾನೂ ನಿಮ್ಮೊಂದಿಗೆ ಇರುತ್ತೇನೆ. ಆದರೆ ಗಲಾಟೆ ಮಾಡಬೇಡಿ. ಶಾಂತಿಯಿಂದ ಇರಿ ಎಂದು ಮುಸ್ಲಿಂ ಬಾಂಧವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.
ಅಖಂಡ ಶ್ರೀನಿವಾಸ್ ಅವರ ಸಂಬಂಧಿಯೋರ್ವ ಮುಸ್ಲಿಂ ಧಾರ್ಮಿಕ ಗುರುಗಳ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದೇ, ಈ ಗಲಭೆಗೆ ಕಾರಣ ಎನ್ನಲಾಗಿದೆ.
(ದಿಗ್ವಿಜಯ ನ್ಯೂಸ್​)
ಶಾಸಕ ಅಖಂಡ ಶ್ರೀನಿವಾಸ್​ ಮನೆ ಮೇಲೆ ಕಲ್ಲು ತೂರಾಟ, ಸ್ಥಳದಲ್ಲಿದ್ದ ವಾಹನಗಳಿಗೆ ಬೆಂಕಿ; ಉದ್ವಿಗ್ನ ಸ್ಥಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + seventeen =
Remember me
