ಬೆಂಗಳೂರು:ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಟಿ ರಾಮಸ್ವಾಮಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ನಂತರ ಮಾತನಾಡಿದ ಎಟಿ ರಾಮಸ್ವಾಮಿ, ‘ನಾನು ಇಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಶಾಸಕಾಂಗ ಪಕ್ಷದ ನಾಯಕರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಸ್ಪೀಕರ್ ಬಂದ ನಂತರ ಅವರನ್ನ ಭೇಟಿ ಆಗ್ತೀನಿ’ ಎಂದಿದ್ದಾರೆ.
ಇದನ್ನೂ ಓದಿ;ಸಂಸತ್​ ಸದಸ್ಯತ್ವದಿಂದ ರಾಹುಲ್​ ಗಾಂಧಿ ಅನರ್ಹ; ಕಾಂಗ್ರೆಸ್​ ಸಂಸದರಿಂದ ಸಾಮೂಹಿಕ ರಾಜೀನಾಮೆ!
ಇದೇ ವೇಳೆ ‘ಜೆಡಿಎಸ್‌ನವರು ನನಗೆ ಶಾಸಕನಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ನಾನೆಂದೂ ವೈಯಕ್ತಿಕ ಲಾಭಕ್ಕಾಗಿ ಆಡಳಿತ ಮಾಡಿರಲಿಲ್ಲ. ವಿಧಾನಸಭೆ ಒಳಗೆ ಮತ್ತು ಹೊರಗೆ ತಪ್ಪನ್ನ ನೇರವಾಗಿ ಮಾತನಾಡಿದ್ದೇನೆ.
ನನ್ನ ವಿರೋಧಿಗಳು ಒಳ್ಳೆಯ ಆಶಯವನ್ನು ಹೊಂದಲಿ. ಎಲ್ಲರಿಗೂ ನನ್ನ ಧನ್ಯವಾದ ತಿಳಿಸುತ್ತೇನೆ. ನನಗೆ ಜನಸೇವೆಗಾಗಿ ಅವಕಾಶ ಸಿಕ್ಕಿತ್ತು. ಮುಂದೆ ಅವಕಾಶ ಸಿಕ್ಕಿದರೂ ಜನಸೇವೆ ಮಾಡುತ್ತೇನೆ. ಕರ್ನಾಟಕ ರಾಜಕಾರಣ ಹಿಂದೆ ಬಹಳ ಚೆನ್ನಾಗಿತ್ತು , ಈಗ ಬಹಳ ಕೆಟ್ಟದಾಗಿದೆ. ಈಗ ಒಲೈಕೆ ರಾಜಕಾರಣ ನಡೆಯುತ್ತಿದೆ. ಜನರ ಹಿತಾಸಕ್ತಿಗೆ ನಾನು ಕೆಲಸ ಮಾಡಿಲ್ಲ. ಹಾಜರಿಗಾಗಿ ನಾನು ಭಾಗವಹಿಸಿಲ್ಲ, ಸಕ್ರಿಯವಾಗಿ ಭಾಗವಹಿಸಿ ನನ್ನ ಕೆಲಸ ಮಾಡಿದ್ದೇನೆ’ ಎಂದು ತಮ್ಮ ಕಾರ್ಯಾವಧಿಯ ಬಗ್ಗೆ ಹೇಳಿಕೆ ನೀಡಿದ್ದಾರೆ.
ಈ ಸಂದರ್ಭ ಅವರು ‘ನಾನು ಜೆಡಿಎಸ್‌ ಬಿಟ್ಟಿಲ್ಲ, ಅವರೇ ಹೊರಗೆ ಹಾಕಿದ್ರು. ನಿಮಗೆ ಎಲ್ಲ ಗೊತ್ತಲ್ಲ, ನಾನು ವಿಕ್ಟಿಮ್. ನಾನು ಹಣದ ಶಕ್ತಿಯ ಮುಂದೆ ಬಲಿಪಾಶು ಆದೆ. ಭ್ರಷ್ಟಾಚಾರವನ್ನ ಎತ್ತಿ ತೋರಿಸಿದಕ್ಕೆ ನನ್ನನ್ನ ವಿಕ್ಟಿಮ್ ಮಾಡಿದ್ರು’ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 8 =
Remember me
