ಬೊಮ್ಮನಹಳ್ಳಿ:ಬೊಮ್ಮನಹಳ್ಳಿ ಸಮೀಪದ ಸೋಮಸುಂದರಪಾಳ್ಯ ಬಳಿಯ ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮ ಘಟಕದ ಕದ ಕೊನೆಗೂ ಮುಚ್ಚಿದೆ.
ಸ್ಥಳೀಯ ಶಾಸಕ ಸತೀಶ್ ರೆಡ್ಡಿ ನಿರಂತರ ಪ್ರಯತ್ನದಿಂದ ಘಟಕವನ್ನು ಅಧಿಕೃತವಾಗಿ ಬಂದ್ ಮಾಡಲಾಗಿದೆ. ಬೆಂಗಳೂರು ನಗರದ 198 ವಾರ್ಡ್​ಗಳಲ್ಲಿ ಉತ್ಪತ್ತಿಯಾಗುತ್ತಿದ್ದ ಕಸ ಮತ್ತು ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿ ಮರುಬಳಕೆ ಮಾಡುವ ಸಲುವಾಗಿ ಘಟಕವನ್ನು ನಿರ್ವಿುಸಲಾಗಿತ್ತು. ಆದರೆ ದಿನಕಳೆದಂತೆ ಕೆಸಿಡಿಸಿಯಲ್ಲಿನ ಬೆಟ್ಟದಂತಹ ಕಸದ ರಾಶಿಯಿಂದ ಹೊರಬರುತ್ತಿದ್ದ ದುರ್ವಾಸನೆಯಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಹೈರಾಣಾಗಿದ್ದರು. ಕೆಟ್ಟ ವಾಸನೆಯಿಂದಾಗಿ ಎಚ್​ಎಸ್​ಆರ್ ಬಡಾವಣೆ, ಸೋಮಸುಂದರಪಾಳ್ಯ, ಹೊಸಪಾಳ್ಯ ಸುತ್ತಮುತ್ತಲಿನ ಜನವಸತಿ ಪ್ರದೇಶದ ವಾಸಿಗಳು ಪದೇಪದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಇಷ್ಟಾದರೂ ಕೆಸಿಡಿಸಿ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ರೊಚ್ಚಿಗೆದ್ದ ಸ್ಥಳೀಯ ನಿವಾಸಿಗಳು ಘಟಕವನ್ನು ಬಂದ್ ಮಾಡುವಂತೆ ಒತ್ತಾಯಿಸಿ ಪದೇಪದೆ ಪ್ರತಿಭಟನೆ ನಡೆಸಿದ್ದರು. ಸ್ಥಳೀಯ ಶಾಸಕ ಸತೀಶ್ ರೆಡ್ಡಿ ಘಟಕವನ್ನು ಬಂದ್ ಮಾಡಿಸುವ ಭರವಸೆ ನೀಡಿದ್ದರು. ಆ ಯತ್ನದಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.
ಕೆಸಿಡಿಸಿ ಘಟಕ ಬಂದ್ ಮಾಡುವಂತೆ ನಿರಂತರವಾಗಿ ಹೋರಾಟ ಮಾಡುತ್ತ ಬರಲಾಗಿತ್ತು. ಅದರ ಫಲವಾಗಿ ಇದೀಗ ಘಟಕ ಬಂದ್ ಮಾಡಲಾಗಿದೆ. ದುರ್ವಾಸನೆ ಬರದಂತೆ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡುತ್ತ ಮಾತಿಗೆ ತಪ್ಪಿದ್ದರು. ಜತೆಗೆ ಕೋರ್ಟ್​ಗೆ ತಪ್ಪು ಮಾಹಿತಿ ನೀಡಿದ್ದರು.| ಸತೀಶ್ ರೆಡ್ಡಿ ಬೊಮ್ಮನಹಳ್ಳಿ ಶಾಸಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
