ಬೆಂಗಳೂರು:ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್​ ಮೂರ್ತಿ ಮನೆ ಮುಂದೆ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 110ಕ್ಕು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳದಲ್ಲಿ ಅನವಶ್ಯಕವಾಗಿ ಯಾರಾದ್ರು ತಿರುಗಾಡಿದ್ರೆ ಪೊಲೀಸರು ಲಾಠಿ ರುಚಿ ತೊರಿಸುತ್ತಿದ್ದು, 20 ಮೀಟರ್​ಗೊಂದರಂತೆ ಕೆ.ಎಸ್.ಆರ್.ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಗಲಭೆಕೋರರನ್ನ ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದಾರೆ. ಇದರ ನಡುವೆ ಜಖಂ ಆದ ವಾಹನ ಹಾಗೂ ಬೆಂಕಿಯಲ್ಲಿ ಸುಟ್ಟು ಕರಕಲಾದ ವಾಹನಗಳ ತೆರವು ನಡೆಸಲು ಸಿದ್ಧತೆ ಆರಂಭವಾಗಿದೆ. ಕೆ.ಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಇದೀಗ ಸಂಪೂರ್ಣ ಖಾಕಿ ಮಯವಾಗಿದೆ.
ಘಟನಾ ಸ್ಥಳದಲ್ಲಿ ಖುದ್ದು ನಗರ ಪೊಲೀಸ್ ಆಯುಕ್ತರೇ ನಿಂತು ನಿರ್ವಹಣೆ ಮಾಡುತ್ತಿದ್ದಾರೆ. ಆರೋಪಿಗಳ‌ ಪತ್ತೆಗೆ ವಿವಿಧ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ ಹಾಗೂ ಸಿಸಿಬಿಗಳ ತಂಡ ರಚನೆ ಮಾಡಲಾಗಿದೆ. ಈಗಾಗಲೇ ಆರೋಪಿಗಳ ಮೊಬೈಲ್‌ ಲೊಕೆಶನ್ ತೆಗೆದು ಅನುಮಾನಸ್ಪದರನ್ನು ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಇನ್ನು ಹಿರಿಯ ಪೊಲೀಸ್ ಅಧಿಕಾರಿಗಳ ಸಂಪರ್ಕದಲ್ಲಿರುವ ಗೃಹ ಸಚಿವರು ಘಟನೆಯ ಬಗ್ಗೆ ಪ್ರತಿ ಅರ್ಧಗಂಟೆಗೊಮ್ಮೆ ಮಾಹಿತಿ ಪಡೆಯುತ್ತಿದ್ದಾರೆ. ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಆರ್ ಆಶೋಕ್, ಸಿಎಂ ಬಿಎಸ್​ವೈ ಅವರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದರ ಬಗ್ಗೆ ಇನ್ನು ಮಾಹಿತಿ ಇಲ್ಲ.
ಆರೋಪಿ ನವೀನ್ ವಿಚಾರಣೆಘಟನೆಗೆ ಕಾರಣ ಎನ್ನಲಾದ ಆರೋಪಿ ನವೀನ್​ರನ್ನು ಬಂಧಿಸಿರುವ ಪೊಲೀಸರು ಕೆ‌ಜಿ ಹಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಸೋಷಿಯಲ್‌ ಮಿಡಿಯಾದಲ್ಲಿ ಅವಹೇಳನ ಕಾರಿ ಪೋಸ್ಟ್​ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಪೊಲೀಸರ ವಿಚಾರಣೆಯಲ್ಲಿ ಫೇಸ್​ಬುಕ್​ ಹ್ಯಾಕ್ ಅಗಿರುವುದಾಗಿ ಆರೋಪಿ ನವೀನ್​ ಹೇಳಿಕೆ ನೀಡಿದ್ದಾನೆ. ಇದೊಂದು ಹುನ್ನಾರ. ಯಾರೋ ಬೇಕೆಂತಲೇ ಕೃತ್ಯ ಎಸಗಿದ್ದಾರೆಂದು ಹೇಳಿಕೆ ನೀಡಿದ್ದಾನೆ.
ಘಟನೆ ಹಿನ್ನೆಲೆ ಏನು?ಶಾಸಕರ ಬಾಮೈದನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗಲಭೆ ನಡೆದಿದೆ.(ಏಜೆನ್ಸೀಸ್​)
ಶಾಸಕ ಅಖಂಡ​ ಶ್ರೀನಿವಾಸ್ ಮನೆ ಮುಂದಿನ ಗಲಭೆಯಲ್ಲಿ ಮೂವರ ಸಾವು, 100ಕ್ಕೂ ಹೆಚ್ಚು ಆರೋಪಿಗಳ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
