ಉಡುಪಿ:ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್​ಎ ಟಿಕೆಟ್ ಕೊಡುವುದಾಗಿ ಹೇಳಿ ವಂಚಿಸಿದ್ದ ಆರೋಪದ ಮೇಲೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ಆರೋಪಿಗಳು.
ಉಡುಪಿ ಜಿಲ್ಲೆಯ ಬೈಂದೂರಿನ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಇವರನ್ನು ವಶಕ್ಕೆ ಪಡೆಯಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರಿಂದ 7 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪ ಈ ನಾಲ್ವರ ವಿರುದ್ಧವಿದೆ.
ಹಿಂದೂಪರ ಪ್ರಖರ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ, ಕೇಂದ್ರದ ನಾಯಕರು, ಆರ್​ಎಸ್​ಎಸ್​ ಪ್ರಮುಖರ ಹೆಸರಿನಲ್ಲಿ ನಕಲಿ ನಾಯಕರ ತಂಡ ಸೃಷ್ಟಿಸಿ ಈ ನಾಲ್ವರು ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಮೂರು ಹಂತದಲ್ಲಿ ಸುಮಾರು ಏಳು ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಆರೋಪವಿದೆ.
ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ; ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ

ತಮಿಳುನಾಡಿಗೆ ಕಾವೇರಿ ನೀರು ಪ್ರಕರಣ: ಸಿಎಂ ನೇತೃತ್ವದಲ್ಲಿಂದು ನಡೆಯಿತು ವಿಶೇಷ ತುರ್ತು ಸಭೆ; ನಾಳೆ ಮತ್ತೆ ಮೀಟಿಂಗ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 14 =
Remember me
