ಚಿತ್ರದುರ್ಗ:ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಕುರಿತು ಕಿಡಿಕಾರಿರುವ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ(ಪಪ್ಪಿ) ವಾರ್ಡನ್​ನನ್ನೂ ರೂಮಿನಲ್ಲಿ ಕೂಡಿ ಹಾಕಿ ಚೆನ್ನಾಗಿ ಹೊಡೆಯಿರಿ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಸಮಾಜ ಕಲ್ಯಾಣ ಇಲಾಖೆಯ ಬಿ.ಇಡಿ, ಕಾನೂನು ಕಾಲೇಜಿನ ಹಾಸ್ಟೆಲ್​ ವಿದ್ಯಾರ್ಥಿಗಳು ತಮಗೆ ಕಳಪೆ ಗುಣಮಟ್ಟದ ಆಹಾರ ಪೂರೈಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ವೀರೇಂದ್ರ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದ್ದರು.
ಈ ವೇಳೆ ಕೆಲ ವಿದ್ಯಾರ್ಥಿಗಳು ಊಟ-ತಿಂಡಿಯಲ್ಲಿ ಕೊಳೆತ ತರಕಾರಿ ಬಳಸಲಾಗುತ್ತಿದೆ, ಅನ್ನದಲ್ಲಿ ಹುಳಗಳೂ ಸಿಗುತ್ತವೆ ಎಂದು ದೂರಿದ್ದಾರೆ. ಇದರಿಂದ ಕುಪಿತಗೊಂಡ ಶಾಸಕ ಇನ್ನೊಮ್ಮೆ ಈ ರೀತಿಯಾದರೆ ಅನ್ನದಲ್ಲಿ ಸಿಗುವ ಹುಳಗಳನ್ನೂ ಆರಿಸಿ ತಟ್ಟಯೊಂದರಲ್ಲಿ ಹಾಕಿ ವಾರ್ಡನ್​ಗೆ ತಿನ್ನಿಸಿ ರೂಮ್​ ಒಂದರಲ್ಲಿ ಕೂಡಿ ಹಾಕಿ ಚೆನ್ನಾಗಿ ಹೊಡೆಯಿರಿ ನಾನಿದ್ದೇನೆ ಎಂದು ಹೇಳಿದ್ಧಾರೆ.
ಇದನ್ನೂ ಓದಿ:ಗೃಹಜ್ಯೋತಿ ಯೋಜನೆ| ದೇಶ ಸುರಕ್ಷಿತವಾಗಿರಬೇಕೆಂದರೆ I.N.D.I.A ಮೈತ್ರಿಕೂಟ ಅಧಿಕಾರಕ್ಕೆ ಬರಬೇಕು: ಮಲ್ಲಿಕಾರ್ಜುನ ಖರ್ಗೆ
ವಿದ್ಯಾರ್ಥಿಗಳು ಈ ರೀತಿ ಮಾಡದೆ ಇದ್ದರೆ ಹಾಸ್ಟೆಲ್​ನ್ ವ್ಯವಸ್ಥೆ ಸರಿ ಹೋಗುವುದಿಲ್ಲ. ಎಷ್ಟು ಬಾರಿ ಎಚ್ಚರಿಕೆ ನೀಡಿದ್ದರೂ ಸಹ ಇವರು ಬುದ್ಧಿ ಕುಲಿಯುವುದಿಲ್ಲ ಎಂದು ಪೊಲೀಸರ ಸಮ್ಮುಖದಲ್ಲೇ ವಿದ್ಯಾರ್ಥಿಗಳನ್ನೂ ಪ್ರಚೋದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆ ಹುಟ್ಟುಹಾಕಿದ್ದು, ಜನಪ್ರತಿನಿಧಿಯೊಬ್ಬರು ಬಹಿರಂಗವಾಗಿ ಈ ರೀತಿ ಮಾತನಾಡುವುದು ತರವಲ್ಲ ಎಂದು ಕೆಲವರೂ ಆಕ್ಷೇಪಿಸಿದ್ದಾರೆ. ಒಂದು ವೇಳೆ ಶಾಸಕರು ಹೇಳಿದರು ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಕಾನೂನು ಕೈಗೆತ್ತಿಕೊಂಡರೆ ಅದರಿಂದಾಗುವ ಅನಾಹುತಕ್ಕೆ ಯಾರು ಹೊಣೆ ಎಂದು ಇನ್ನೂ ಕೆಲವರೂ ಪ್ರಶ್ನಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
