ಬೆಂಗಳೂರು:ಕರೊನಾದಿಂದ ಕಂಗೆಟ್ಟ ಶಾಸಕರಿಗೆ ಸಿಎಂ ಬಿ.ಎಸ್​.ಯಡಿಯೂರಪ್ಪ ಶುಕ್ರವಾರ ಸಿಹಿಸುದ್ದಿ ಕೊಟ್ಟಿದ್ದಾರೆ. ಕ್ಷೇತ್ರಗಳ ಅಭಿವೃದ್ಧಿಗೆ ಹಣ ಇಲ್ಲದೆ ಕ್ಷೇತ್ರದತ್ತ ಮುಖ ಮಾಡೋಕೆ ಆಗ್ತಿಲ್ಲ. ಜನರು ಹಿಗ್ಗಾಮುಗ್ಗಾ ತರಾಟೆಗೆ ತೆಗುದುಕೊಳ್ತಾರೆ ಎಂದು ಅಸಮಾಧಾನ ಹೊರಹಾಕುತ್ತಿದ್ದ ಶಾಸಕರಿಗೆ ಆತಂಕಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಬಿಎಸ್​ವೈ ಅಭಯ ನೀಡಿದರು.
ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ, ಮಾರ್ಚ್ ಅಂತ್ಯದೊಳಗೆ ಘೋಷಿತ ಅನುದಾನ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಸಂಬಂಧ ಶೀಘ್ರವೇ ಸೂಕ್ತ ಆದೇಶ ಹೊರಡಿಸಲಾಗುವುದು. ಶೇ.85 ಘೋಷಿತ ಅನುದಾನವನ್ನು ಕೊಡಲು ತೀರ್ಮಾನಿಸಿದ್ದೇನೆ ಎಂದರು.ಇದನ್ನೂ ಓದಿರಿತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…
ಶಾಸಕರುಗಳ ಕ್ಷೇತ್ರದ ಅಭಿವೃದ್ಧಿಗೆ ಘೋಷಿಸಿರುವ ಅನುದಾನವನ್ನು ಬಿಡುಗಡೆ ಮಾಡುತ್ತೇನೆ. ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಡಿ. ಆರ್ಥಿಕ ಇಲಾಖೆಯ ಮೂಲಕ ತಡೆಹಿಡಿಯಲಾದ ಅನುದಾನ ಶೀಘ್ರವೇ ನಿಮ್ಮ ಕೈ ಸೇರಲಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯ ನಡೆಸಿ ಎಂದು ಅಧಿವೇಶನದ ಕೊನೆಯ ದಿನ ಯಡಿಯೂರಪ್ಪ ಭರವಸೆ ನೀಡಿದರು.
ಅನುದಾನ ಇಲ್ಲದೇ ಕ್ಷೇತ್ರದ ಕಡೆ ಹೋಗೋಕೆ ಆಗ್ತಾ ಇಲ್ಲ ಎಂದು ಸದನದಲ್ಲಿ ಆಡಳಿತ ಪಕ್ಷದ ಶಾಸಕರೇ ಅಸಮಾಧಾನ ಹೊರಹಾಕಿದ್ದರು. ವಿಪಕ್ಷವೂ ಆಕ್ರೋಶ ಹೊರಹಾಕಿತ್ತು. ಇದಕ್ಕೆ ಉತ್ತರಿಸಿದ ಬಿಎಸ್​ವೈ, ಅನುದಾನ ಸಮಸ್ಯೆಗೆ ಮುಕ್ತಿ ನೀಡಿದ್ದರು.
ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

ತನ್ನ ಶಾಲೆ ಆವರಣದಲ್ಲೇ ಹಳೇ ವಿದ್ಯಾರ್ಥಿ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
