ಬೆಂಗಳೂರು:ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರ ಕಾರಿನ ನಂಬರನ್ನು ಮತ್ತೊಂದು ಕದ್ದ ಕಾರಿಗೆ ನಕಲಿ ಪ್ಲೇಟ್ ಅಳವಡಿಸಿ ಮತ್ತು ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಟ್ಟೂರು ಲೇಔಟ್ ಮುಖ್ಯರಸ್ತೆ ನಿವಾಸಿ ಮಂಜುನಾಥ್ (45), ಮೈಸೂರು ನಿವಾಸಿ ಶಾಬಾಜ್ ಖಾನ್ (31) ಬಂಧಿತರು. ಆರೋಪಿಗಳಿಂದ ಇನ್ನೋವಾ ಕ್ರಿಸ್ಟಾ ಕಾರು ಹಾಗೂ ನಕಲಿ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತಿಬ್ಬರು ಆರೋಪಿಗಳಿಗೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಸ್ವಾಮೀಜಿಗಳು ಸಿಎಂ ಯೋಗಿ ಆದಿತ್ಯನಾಥರ ಥರ ಆಗಬಾರದು: ಮುಖ್ಯಮಂತ್ರಿ ಚಂದ್ರು
ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಪಕ್ಕದಲ್ಲೇ ಇರುವ ಸೆಕೆಂಡ್ ಹ್ಯಾಂಡ್ ಐ-ಕಾರ್ ಶೋ ರೂಂನಲ್ಲಿ ಫೆ.22ರ ಸಂಜೆ 4.30ರ ಸಮಯದಲ್ಲಿ ಭೋಜೇಗೌಡ ಅವರ ಕಾರಿನ ನಂಬರ್ ಪ್ಲೇಟ್ (ಕೆಎ-18-ಝಡ್-5977) ಅಳವಡಿಸಲಾಗಿದ್ದ ಕಾರು ನಿಂತಿರುವುದನ್ನು ಅವರ ಆಪ್ತ ಸಹಾಯಕ ಮಾದೇಶ್ ಗಮನಿಸಿದ್ದಾರೆ. ತಕ್ಷಣ ಶೋರೂಂ ಒಳಗೆ ತೆರಳಿ ಕಾರಿನ ಬಗ್ಗೆ ವಿಚಾರಿಸಿದಾಗ, ಕಾರು ಮಾರಾಟಕ್ಕಿದೆ, ನಿಮಗೆ ಬೇಕಿತ್ತಾ ಟೆಸ್ಟ್ ರೈಡ್ ಮಾಡಿ ನೋಡುವಿರಾ ಎಂದು ಶೋರೂಂ ಸಿಬ್ಬಂದಿ ಕೇಳಿದ್ದಾರೆ. ಇದರಿಂದ ಮತ್ತಷ್ಟು ಅನುಮಾನಗೊಂಡು ಕಾರಿನ ದಾಖಲಾತಿಗಳನ್ನು ಪರಿಶೀಲಿಸಿದಾಗ ಅಚ್ಚರಿ ಎಂಬಂತೆ ಆರ್.ಸಿ ಕಾರ್ಡ್ ಕೂಡ ಭೋಜೇಗೌಡರ ಹೆಸರಿನಲ್ಲಿರುವುದು ಪತ್ತೆಯಾಗಿದೆ. ತಕ್ಷಣ ಭೋಜೇಗೌಡರಿಗೆ ಕರೆ ಮಾಡಿದ್ದ ಅವರ ಆಪ್ತ ಸಹಾಯಕ ಸರ್ ನಿಮ್ಮ ಕಾರ್ ಮಾರಾಟಕ್ಕೆ ಇಟ್ಟಿದ್ದಿರಾ ಎಂದು ಕೇಳಿದ್ದಾರೆ. ಅದಕ್ಕೆ ಭೋಜೇಗೌಡರು ಇಲ್ಲ, ಕಾರು ಚಿಕ್ಕಮಗಳೂರಿನ ನನ್ನ ಮನೆಯ ಬಳಿಯೇ ಇದೆ ಎಂದಾಗ, ಶೋರೂಂನಲ್ಲಿ ನಿಮ್ಮ ಕಾರಿನ ನಂಬರ್ ಮತ್ತೊಂದು ಕಾರು ಇದೆ ಎಂದು ವಿಷಯ ಮುಟ್ಟಿಸಿದ ಬಳಿಕ ಹೈಗ್ರೌಂಡ್ಸ್ ಠಾಣೆಯಲ್ಲಿ ಮಾದೇಶ ದೂರು ನೀಡಿದ್ದಾರೆ.
ಇದನ್ನೂ ಓದಿ:ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ
ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ಸ್ ಪೊಲೀಸ್ ಇನ್‌ಸ್ಪೆಕ್ಟರ್ ಶಿವಸ್ವಾಮಿ ನೇತೃತ್ವದ ತಂಡ ತನಿಖೆ ಕೈಗೊಂಡು ಶೋ ರೂಂ ಮಾಲೀಕ ಇಮ್ರಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾಗ ಮಂಜುನಾಥ್, ಶಾಬಾಜ್ ಖಾನ್ ಎಂಬುವವರು ನನಗೆ ಮಾರಾಟ ಮಾಡಲು ನೀಡಿದ್ದರು ಎಂದು ತಿಳಿಸಿದ್ದಾರೆ. ಈ ಮಾಹಿತಿಯನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿಗಳು ಮೈಸೂರಿನಲ್ಲಿ ಇನ್ನೋವಾ ಕ್ರಿಸ್ಟಾ ಕಾರನ್ನು ಕದ್ದು ತಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಆ ಕಾರನ್ನು 3 ದಿನಗಳ ಹಿಂದೆ ಶೋ ರೂಂ ಮಾಲೀಕ ಇಮ್ರಾನ್‌ಗೆ ನೀಡಿ ಮಾರಾಟ ಮಾಡಿಕೊಡಲು ಹೇಳಿದ್ದಾರೆ. ಹೀಗಾಗಿ ಶೋ ರೂಂ ಮಾಲೀಕ ಕಾರನ್ನು ಮಾರಾಟ ಮಾಡಲು ಮುಂದಾಗಿದ್ದ.
ಇದನ್ನೂ ಓದಿ:ಬೇರೆ ಏನನ್ನಾದರೂ ಬರೆದಿರುವ ನೋಟುಗಳನ್ನು ಸ್ವೀಕರಿಸುವಂತಿಲ್ಲವೇ?: ಇಲ್ಲಿದೆ ಸತ್ಯಾಂಶ
ಶೋ ರೂಂ ಬಳಿ ನಿಂತಿದ್ದ ಕಾರಿನ ಸಂಖ್ಯೆಯನ್ನು ಭೋಜೇಗೌಡ ಅವರ ಆಪ್ತ ಸಹಾಯಕ ಮಾದೇಶ್ ಗಮನಿಸಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
