ಬೆಂಗಳೂರು:ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಆರ್. ಶಂಕರ್ ಹಾಗೂ ಎಂಟಿಬಿ ನಾಗರಾಜ್‌ಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ಬಂಧ ವಿಧಿಸಲು ನಿರಾಕರಿಸಿರುವ ಹೈಕೋರ್ಟ್, ಈ ಮೂವರಿಗೂ ಸಚಿವ ಸ್ಥಾನ ನೀಡಿದಲ್ಲಿ ಅದು ನ್ಯಾಯಾಲಯದ ಮುಂದಿನ ಆದೇಶಗಳಿಗೆ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿದೆ.
ಬೆಂಗಳೂರಿನ ವಕೀಲ ಎ. ಹರೀಶ ಹಾಗೂ ಜಿ. ಮೋಹನ್ ಕುಮಾರ್ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಸುಪ್ರೀಂಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿ, ಸದ್ಯದ ಮಾಹಿತಿಯಂತೆ ಈ ಮೂವರೂ ಪರಿಷತ್ ಸದಸ್ಯರಿಗೆ ಶೀಘ್ರದಲ್ಲೇ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಅನರ್ಹರಾದವರು ಮರು ಆಯ್ಕೆಯಾಗಲು ಮಾತ್ರ ಅವಕಾಶವಿದೆ. ಆದರೆ, ಎಚ್. ವಿಶ್ವನಾಥ್ ನಾಮನಿರ್ದೇಶಿತ ಶಾಸಕರಾಗಿದ್ದು, ಅವರ ಆಯ್ಕೆಯೇ ಸಂವಿಧಾನಬಾಹಿರವಾಗಿದೆ. ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್ ವಿಧಾನಸಭೆಯಿಂದ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಹಿಂಬಾಗಿಲಿನಿಂದ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಸಹ ಆಕ್ಷೇಪಣೆ ಸಲ್ಲಿಸಲು ವಿಳಂಬ ಮಾಡುತ್ತಿದೆ. ಆದ್ದರಿಂದ, ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿದರು.
ಮೂವರೂ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ. ಆದರೆ, ಅರ್ಜಿ ಕುರಿತು ಆದೇಶ ಹೊರಡಿಸುವ ಮುನ್ನ ಪ್ರತಿವಾದಿಗಳ ವಾದವನ್ನೂ ಆಲಿಸಬೇಕಿದೆ. ಆದ್ದರಿಂದ, ಸರ್ಕಾರ ವಿಳಂಬ ಮಾಡದೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಿದ ಪೀಠ, ಪ್ರಕರಣ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿರುವ ಕಾರಣ, ಈ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಮುಂದಿನ ಆದೇಶಗಳಿಗೆ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿ ವಿಚಾರಣೆಯನ್ನು ನ. 19 ಕ್ಕೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
