ಬೆಂಗಳೂರು:ರಾಜ್ಯ ವಿಧಾನ ಪರಿಷತ್‌ನ ಆರು ಸದಸ್ಯ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರ 54 ಅಭ್ಯರ್ಥಿಗಳು 85 ನಾಮಪತ್ರ ಸಲ್ಲಿಸಿದ್ದಾರೆ. ಮೇ 9 ರಿಂದ ಇದುವರೆಗೆ ಒಟ್ಟು 103 ಅಭ್ಯರ್ಥಿಗಳು 153 ನಾಮಪತ್ರ ಸಲ್ಲಿಸಿದ್ದಾರೆ.
ಈವರೆಗೆ ಒಟ್ಟು ಬಿಜೆಪಿ 5, ಕಾಂಗ್ರೆಸ್ 6, ಜೆಡಿಎಸ್ 2, ರಿಜಿಸ್ಟರ್ಡ್ ಅನ್‌ರೆಕಗ್ನೆಸ್ಡ್ ಪೊಲಿಟಿಕಲ್ ಪಾರ್ಟಿ 7 ಹಾಗೂ ಪಕ್ಷೇತರರು 83 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ಒಟ್ಟು ನಾಮಪತ್ರ ಸಲ್ಲಿಸಿದ 103 ಅಭ್ಯರ್ಥಿಗಳು ಪೈಕಿ 100 ಪುರುಷರು, 3 ಮಹಿಳೆಯರು ಸೇರಿದ್ದಾರೆ.ಈಶಾನ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ, ನೈರುತ್ಯ ಪದವೀಧರರ ಕ್ಷೇತ್ರದಿಂದ ಆಯನೂರು ಮಂಜುನಾಥ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ನ ವಿವೇಕಾನಂದ ಗುರುವಾರ ನಾಮಪತ್ರ ಸಲ್ಲಿಸಿದ ಪ್ರಮುಖರು.
ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆ ತರುವಾಯ ತಿರಸ್ಕೃತಗೊಂಡ ಹಾಗೂ ಕ್ರಮಬದ್ಧ ನಾಮಪತ್ರಗಳನ್ನು ಪ್ರಕಟಿಸಲಾಗುತ್ತದೆ.
ನಾಮಪತ್ರಗಳನ್ನು ವಾಪಸ್ ಪಡೆಯಲು ಮೇ 20 ರವರೆಗೂ ಕಾಲಾವಕಾಶವಿದೆ. ಅಂದು ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.
ಈಶಾನ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂ.3 ರಂದು ಚುನಾವಣೆ ನಡೆಯಲಿದೆ.
ಲೋಕಸಭೆ ಚುನಾವಣೆಯಂತೆ ಮೇಲ್ಮನೆ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ. ಜೆಡಿಎಸ್‌ಗೆ ಎರಡು ಸ್ಥಾನ ಬಿಜೆಪಿಗೆ 4 ಸ್ಥಾನ ಹಂಚಿಕೆಯಾಗಿದೆ. ಕಾಂಗ್ರೆಸ್ ಎಲ್ಲ 6 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಮತ್ತು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + seven =
Remember me
