ಬೆಂಗಳೂರು:ವಿಧಾನ ಪರಿಷತ್ತಿ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಸೋಮವಾಋ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಈಶಾನ್ಯ, ಬೆಂಗಳೂರು ಮತ್ತು ನೈರುತ್ಯ ಪದವೀಧರರ ಕ್ಷೇತ್ರ ಮತ್ತು ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ಈ ಚುನಾವಣೆಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಒಬ್ಬ ಮಹಿಳಾ ಅಭ್ಯರ್ಥಿ ಸೇರಿದಂತೆ ಒಟ್ಟು 78 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಮೂರು ಪದವೀಧರರ ಕ್ಷೇತ್ರದಲ್ಲಿ 3,63,573 ಹಾಗೂ ಮೂರು ಶಿಕ್ಷಕರ ಕ್ಷೇತ್ರದಲ್ಲಿ 70,260 ಮತದಾರರು ಸೇರಿ ಒಟ್ಟು 4,33,833 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.
ಮತದಾನಕ್ಕೆ ಒಟ್ಟು ಪದವೀಧರರ ಕ್ಷೇತ್ರ ವ್ಯಾಪ್ತಿಯಲ್ಲಿ 461 ಮತ್ತು ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ 170 ಮತಗಟ್ಟೆ ಸ್ಥಾಪಿಸಲಾಗಿದೆ.ಈ ಚುನಾವಣೆಯಲ್ಲಿ ಮತದಾರರ ಬಲಗೈ ತೋರುಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 19, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 15, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 1,56,623, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 85,090, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 1,21,860 ಮತದಾರರಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 25,309, ನೈರುತ್ಯ ಶಿಕ್ಷಕರ ಕ್ಷೇತ್ರ 23,402, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 21,549 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 47, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 79, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 44 ಮತಗಟ್ಟೆಗಳಿವೆ.ಅದೇ ರೀತಿ ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 159, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 108, ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 194 ಮತಗಟ್ಟೆ ಸ್ಥಾಪಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fourteen =
Remember me
