ಬೆಂಗಳೂರು:ವಿಧಾನಸಭೆ ಚುನಾವಣೆಗೆ ಜೆಡಿಎಸ್ ತಯಾರಿ ಆರಂಭಿಸಿದೆ. ನೈರುತ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್.ಎಲ್.ಭೋಜೇಗೌಡರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಬಿ.ಾರಂ ವಿತರಿಸಿದರು.
ಈ ಸಂದರ್ಭದಲ್ಲಿ ಚುನಾವಣಾ ರಣತಂತ್ರ, ಮೈತ್ರಿ ಪಕ್ಷಗಳ ಸಮನ್ವಯದ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ೋಷಣೆ ಮಾಡಿರುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಬಿಜೆಪಿ ಹೈಕಮಾಂಡ್ ಜತೆ ಸಂವಹನದ ಕೊರತೆಯಿಂದ ಸಮಸ್ಯೆ ತಲೆದೋರಿದೆ. ಈಗಾಗಲೇ ಬಿಜೆಪಿ ವರಿಷ್ಠರ ಜತೆ ಮಾತನಾಡಿದ್ದು, ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಭರವಸೆ ನೀಡಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಭೆಗೆ ತಿಳಿಸಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕೆ.ಟಿ.ಶ್ರೀಕಂಠೇಗೌಡ ಹಾಗೂ ವಿವೇಕಾನಂದ ಅವರು ಹೆಸರು ಮುನ್ನೆಲೆಗೆ ಬಂದಿದ್ದು, ಒಂದೆರಡು ದಿನಗಳಲ್ಲಿ ಯಾರು ಅಭ್ಯರ್ಥಿ ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಕುಮಾರಸ್ವಾಮಿ ಅವರಿಗೆ ವಹಿಸಲಾಯಿತು.
ಸಭೆಯ ಬಳಿಕ ಮಾತನಾಡಿದ ಶ್ರೀಕಂಠೇಗೌಡ, ದಕ್ಷಿಣ ಕ್ಷೇತ್ರದ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆಯಾಗಿದೆ. ಕಳೆದ ಹಲವು ವರ್ಷಗಳಿಂದ ನಾನು ಶಿಕ್ಷಕರ ಸಮಸ್ಯೆಗೆ ಧ್ವನಿಯಾಗಿದ್ದೇನೆ. ಇದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ನನಗೆ ಟಿಕೆಟ್ ಸಿಗುವ ಭರವಸೆ ಇದೆ. ಮೇ 15 ರಂದು ಅಂತಿಮ ನಿರ್ಧಾರ ಹೊರ ಬೀಳಲಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
