ಬೆಂಗಳೂರು:ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತರೆವಾಗಿರುವ ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ಘೊಷಣೆಯಾಗಿದ್ದು, ಜೂ. 25 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ಜುಲೈ 3ರಂದು ನಡೆಯಲಿದ್ದು, ನಾಮಪತ್ರ ವಾಪಸ್‌ಗೆ ಜುಲೈ 5ರವರೆಗೂ ಅವಕಾಶವಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ ಜುಲೈ 12ರಂದು ಬೆಳಗ್ಗೆ 9ರಿಂದ ಸಂಜೆ ನಾಲ್ಕು ಗಂಟೆವರೆಗೆ ಮತದಾನ ನಡೆಯಲಿದೆ. ಅಂದೇ ಸಂಜೆ 5ರ ನಂತರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.
ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯಲಿದೆ. 2028ರ ಜೂ.14 ರವರೆಗೆ ಈ ಚುನಾವಣೆಯಲ್ಲಿ ಆಯ್ಕೆಯಾಗುವ ಸದಸ್ಯರ ಅವಧಿ ಇದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡು ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಅವರು ಪರಾಭವಗೊಂಡಿದ್ದರು. ಬಳಿಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.
ಈಗ ಮತ್ತೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರಳಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶೆಟ್ಟರ್ ಚುನಾಯಿತರಾಗಿದ್ದಾರೆ.
ವಿಧಾನಸಭೆ ಸದಸ್ಯರ ಸಂಖ್ಯಾಬಲದ ಆಧಾರದ ಮೇಲೆ ಈ ಚುನಾವಣೆ ನಡೆಯುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ. ಈ ಸ್ಥಾನಕ್ಕೆ ಕಾಂಗ್ರೆಸ್ ಬಸವನಗೌಡ ಬಾದರ್ಲಿ ಅವರಿಗೆ ಟಿಕೆಟ್ ೋಷಣೆ ಮಾಡಿದೆ. ಹಾಗಾಗಿ ಜೆಡಿಎಸ್ ಮತ್ತು ಬಿಜೆಪಿ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
