ಬೆಂಗಳೂರು:ಮೇಲ್ಮನೆಯ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸೋಮವಾರ ಒಂದೇ ದಿನ 11 ಅಭ್ಯರ್ಥಿಗಳು 17 ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಕೆಗೆ ಇನ್ನು ಮೂರೇ ದಿನ ಬಾಕಿ ಉಳಿದಿದ್ದು, ಸೋಮವಾರ ಅತಿ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿವೆ.
ಮೇ 9 ರಂದು ಅಧಿಸೂಚನೆ ಪ್ರಕಟಿಸಿದ್ದು, ಅಂದಿನಿಂದ ಇಂದಿನವರೆಗೆ ಒಟ್ಟು 13 ಅಭ್ಯರ್ಥಿಗಳು 19 ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಮತ್ತು ಕಾಂಗ್ರೆಸ್‌ನಿಂದ ಟಿ.ಡಿ. ಶ್ರೀನಿವಾಸ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ ಹಾಗೂ ಕಾಂಗ್ರೆಸ್‌ನಿಂದ ರಾಮೋಜಿಗೌಡ ಮತ್ತಿತರರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳಾದ ರಾಮೋಜಿಗೌಡ ಹಾಗೂ ಶ್ರೀನಿವಾಸ್ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್.ಮುನಿಯಪ್ಪ, ಮಧು ಬಂಗಾರಪ್ಪ, ಸಂಸದ ಡಿ.ಕೆ.ಸುರೇಶ್, ಪುಟ್ಟಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಮತ್ತಿತರರು ಪಾಲ್ಗೊಂಡಿದ್ದರು.
ಬಿಜೆಪಿ ಅಭ್ಯರ್ಥಿಗಳಾದ ನಾರಾಯಣಸ್ವಾಮಿ ಹಾಗೂ ದೇವೇಗೌಡ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ ಭಾಗಿಯಾಗಿದ್ದರು.
ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಭಾರೀ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಬಂದು ಗಮನ ಸೆಳೆದರು. ಇದರಿಂದಾಗಿ ಶಾಂತಿನಗರದ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ಇದ್ದರೂ ಸಹ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಆ ಪಕ್ಷದ ಮುಖಂಡರ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಮಾಜಿ ಸಚಿವ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಇದ್ದ ಕಾರಣ ಕುಮಾರಸ್ವಾಮಿ ಕಾನೂನು ತಜ್ಞರ ಜತೆ ಚರ್ಚೆಯಲ್ಲಿದ್ದರು.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಎಸ್.ಎಲ್. ಬೋಜೇಗೌಡ, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಸಿದ್ದಾರೆ.ಈವರೆಗೆ ಬಿಜೆಪಿ 3, ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರು 7 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮಹಿಳೆಯರು ಯಾವ ಕ್ಷೇತ್ರದಲ್ಲೂ ಈವರೆಗೆ ನಾಮಪತ್ರ ಸಲ್ಲಿಸಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
