ಬೆಂಗಳೂರು:ವಿಧಾನ ಪರಿಷತ್​ನ ನಾಲ್ಕು ಕ್ಷೇತ್ರಗಳಿಗೆ ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಎರಡು ಗಂಟೆ ಅವಧಿಯಲ್ಲಿ ಸರಾಸರಿ ಶೇಕಡ 8.2 ಮತದಾನ ದಾಖಲಾಗಿದೆ. ಬಹುತೇಕ ಎಲ್ಲ ಮತಗಟ್ಟೆಗಳಲ್ಲೂ ಕೋವಿಡ್ ನಿಯಮ ಪಾಲಿಸಲಾಗಿದ್ದು, ಮತದಾರರೂ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.
ಎರಡು ಗಂಟೆ ಅವಧಿಯಲ್ಲಿ ಅಂದರೆ ಬೆಳಗ್ಗೆ 8 ರಿಂದ 10 ಗಂಟೆ ತನಕ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 8.34%, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 10%, ಆಗ್ನೇಯ ಪದವೀಧರ ಕ್ಷೇತ್ರ (ಬೆಂಗಳೂರು)ದಲ್ಲಿ 7%, ಪಶ್ಚಿಮ ಪದವೀಧರ ಕ್ಷೇತ್ರ ( ಬೆಳಗಾವಿ)ದಲ್ಲಿ 7.49% ಮತದಾನವಾಗಿದೆ.ಇನ್ನುಳಿದಂತೆ ಮತದಾನ ಶಾಂತಿಯುತವಾಗಿ ಸಾಗಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.
ಆಗ್ನೇಯ ಪದವೀಧರ ಚುನಾವಣೆ: ತುಮಕೂರಿನಲ್ಲಿ ಮತದಾನ ಆರಂಭ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − twelve =
Remember me
