ಕೊಡಗು:ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಕಾರ್ಯಕ್ರಮ ನಡೆಯತ್ತಿರುವಾಗಲೇ ಹೊರಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮತ್ತು ಪೊಲೀಸರ ನಡುವೆ ಮಾತಿನಚಕಮಕಿ ಏರ್ಪಟ್ಟಿದೆ. “ಕಾವೇರಿ ಮಾತೆ ಮುನಿಸಿಕೊಂಡ ಅನುಭವವಿದೆ ಸಾಕು, ಅಧಿಕಾರಿಗಳು ಇಷ್ಟಬಂದಂತೆ ನಡೆದುಕೊಂಡರೆ ಹೇಗೆ?’ ಎಂದು ವೀಣಾ ಅಚ್ಚಯ್ಯ ಅವರು ಆಕ್ರೋಶ, ಅಸಮಾಧಾನ ಹೊರಹಾಕಿದ್ದಾರೆ.
ಕಾವೇರೀ ತೀರ್ಥೋದ್ಭವ ಕಾರ್ಯಕ್ರಮ ಕೊಡಗಿನವರಿಗೆ ಅತ್ಯಂತ ಪವಿತ್ರವಾದದು. ಇಲ್ಲಿ ಸಾರ್ವಜನಿಕರಿಗೆ ಅವಕಾಶ ನಿರಾಕರಿಸಿ, ಅಧಿಕಾರಿಗಳು ಇಷ್ಟಬಂದಂತೆ ನಡೆದುಕೊಂಡರೆ ಅದು ಸಹನೀಯವಲ್ಲ. ಇಲ್ಲಿಯವರು ಕೊಡಗಿನ ಸಾಂಪ್ರದಾಯಿಕ ಶೈಲಿಯಲ್ಲಿ ಕೋವಿಡ್​-19 ನಿಯಮಗಳನ್ನು ಪಾಲಿಸಿಕೊಂಡು ಬರ್ತಿದ್ದಾರೆ. ಅವರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಕೊಡಿ. ಇಲ್ಲದೇ ಹೋದರೆ ನಾನು ಕೂಡ ಇದರಲ್ಲಿ ಭಾಗಿಯಾಗುವುದಿಲ್ಲ ಎಂದು ಹಟಹಿಡಿದರು.
ಇದನ್ನೂ ಓದಿ:ಐತಿಹಾಸಿಕ ಸರಳ ದಸರಾ ಆರಂಭಕ್ಕೆ ಕ್ಷಣಗಣನೆ
ಪೊಲೀಸರು ಮತ್ತು ಅಧಿಕಾರಿಗಳು ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯನವರನ್ನು ಸಮಾಧಾನಿಸುವ ಪ್ರಯತ್ನ ಮಾಡಿದರು. ಈ ನಡುವೆ, ಕಾವೇರಿ ತೀರ್ಥೋದ್ಭವ ಸಂಪನ್ನವಾಗಿದೆ. (ದಿಗ್ವಿಜಯ ನ್ಯೂಸ್)
ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಸಂಪನ್ನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 6 =
Remember me
