ಬೆಂಗಳೂರು:ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನಪರಿಷತ್ ಸದಸ್ಯರ ಜತೆ ವಿಶೇಷ ಸಭೆ ನಡೆಸಿದ ಡಿಸಿಎಂ ಸಿ.ಎನ್. ಅಶ್ವತ್ಥನಾರಾಯಣ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿವರಣೆ ನೀಡಿ, ಅವರ ಗೊಂದಲ ಪರಿಹರಿಸುವ ಪ್ರಯತ್ನ ಮಾಡಿದರು.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಈಗಾಗಲೇ ಅನೇಕ ಕ್ರಾಂತಿಕಾರಿ ಸುಧಾರಣೆ ಗಳನ್ನು ತರಲಾಗಿದೆ. ಮುಂದೆ ಕೈಗೊಳ್ಳಬಹುದಾದ ಸುಧಾರಣೆಗಳು, ನೂತನವಾಗಿ ಜಾರಿಗೆ ಬಂದಿರುವ ‘ಕರ್ನಾಟಕ ಕಲಿಕಾ ನಿರ್ವಹಣಾ ವ್ಯವಸ್ಥೆ’ (ಎಲ್​ಎಂಎಸ್) ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದರು.
3 ದಶಕಗಳಿಗೂ ಮಿಕ್ಕಿ ಹಳೆಯದಾದ, ಪ್ರಸಕ್ತ ಸಂದರ್ಭಕ್ಕೆ ಸೂಕ್ತವಲ್ಲದ ಶಿಕ್ಷಣ ನೀತಿಯಿಂದ ಯಾವುದೇ ಪ್ರಯೋಜವಿಲ್ಲ. ಹೊಸ ನೀತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶಕ್ತಿ ತುಂಬಬಲ್ಲ ಅಂಶಗಳಿವೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ಈಗಾಗಲೆ ಉನ್ನತ ಶಿಕ್ಷಣ ಪರಿಷತ್ ಇದೆ. ಜತೆಗೆ, ಪ್ರಾಥಮಿಕ ಶಿಕ್ಷಣ ಪರಿಷತ್ ಸ್ಥಾಪನೆ ಮಾಡುವ ಸರಕಾರದ ಪ್ರಯತ್ನಕ್ಕೆ ಒಕ್ಕೊರಲ ಬೆಂಬಲ ಸೂಚಿಸಿದರು. ಶಿಕ್ಷಣ ಕ್ಷೇತ್ರಕ್ಕೆ ಪೂರಕವಾದ 3 ಹೊಸ ಕಾನೂನುಗಳನ್ನು ಜಾರಿಗೆ ತರಬೇಕಿದೆ ಹಾಗೂ ಶಿಕ್ಷಣ ನೀತಿ ಜಾರಿಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಆದಷ್ಟು ಬೇಗ ರ್ಚಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಸಂಪುಟ ಸಭೆ ತಾತ್ವಿಕ ಒಪ್ಪಿಗೆ ನೀಡಿದ ಕಾನೂನು ರಚನೆಗಳಿಗೆ ಸಹಕಾರ ನೀಡಲಾಗುತ್ತದೆ.
|ಅರುಣ್ ಶಹಾಪುರವಿಧಾನಪರಿಷತ್ ಸದಸ್ಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
