ಬಾಗಲಕೋಟೆ:ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ತಣ್ಣನೆಯ ವಾತಾವರಣವಿದ್ದರೂ ಇಲ್ಲೊಂದು ಕಡೆ ದ್ವೇಷದ ದಳ್ಳುರಿಗೆ ಬಡಪಾಯಿಗಳ ತಳ್ಳುಗಾಡಿಗಳು ಹೊತ್ತಿ ಉರಿದು ಬೆಂಕಿಗೆ ಆಹುತಿಯಾಗಿವೆ. ಮಾತ್ರವಲ್ಲ ಇಬ್ಬರಿಗೆ ಚೂರಿ ಇರಿಯಲಾಗಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಈ ಗುಂಪು ಘರ್ಷಣೆ ಸಂಭವಿಸಿದೆ. ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ ಎಂಬವರಿಗೆ ಚೂರಿಯಿಂದ ಇರಿಯಲಾಗಿದ್ದು, ಯಮನೂರಿ ಚುಂಗಿನ ಎಂಬವರಿಗೂ ಗಾಯವಾಗಿದೆ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾರುಕಟ್ಟೆಯಲ್ಲಿ ಒಂದು ಕೋಮಿನವರಿಗೆ ಸೇರಿದ ತರಕಾರಿ ಚೆಲ್ಲಿದ್ದಲ್ಲದೆ ಎರಡು ತಳ್ಳುಗಾಡಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ ಐದು ಬೈಕ್​ಗಳು ಜಖಂಗೊಂಡಿವೆ. ಈ ಗುಂಪು ಘರ್ಷಣೆಯಿಂದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆರೂರು ಪಟ್ಟಣದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ. ಪೊಲೀಸರು ಹರಸಾಹಸದಿಂದ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಿಗಿ ಬಂದೋಬಸ್ತ್​​ಗೆ ಏರ್ಪಾಡು ಮಾಡಲಾಗಿದೆ.

ಗಜಪ್ರಸವಕ್ಕಾಗಿ ರಸ್ತೆಯೇ ಬಂದ್; 2 ರಾಜ್ಯಗಳ ಮಾರ್ಗದ ಮಧ್ಯೆ 1 ಗಂಟೆ ಸಂಚಾರ ಸ್ಥಗಿತ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
