
ಬೆಂಗಳೂರು:ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಆನ್‌ಲೈನ್ ಸೇವೆ, ಕೊಠಡಿ ಕಾದಿರಿಸಲು ಪ್ರತ್ಯೇಕವಾಗಿ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಬೇಕೆಂಬ ಭಕ್ತರ ಕೋರಿಕೆ, ಬದಲಾದ ತಂತ್ರಜ್ಞಾನ ಯುಗದ ನಿರೀಕ್ಷೆಗೆ ಸರ್ಕಾರ ಸ್ಪಂದಿಸಿ, ಈ ದಿಸೆಯಲ್ಲಿ ಮಹತ್ವದ ಹೆಜ್ಜೆಯಿಟ್ಟಿದೆ.
ಸಾರಿಗೆ ಆಯುಕ್ತರ ಕಚೇರಿಯಲ್ಲಿ ಶನಿವಾರ ನಡೆದ ಧಾರ್ಮಿಕ ದತ್ತಿ ಇಲಾಖೆ ಹಿರಿಯ ಅಧಿಕಾರಿಗಳು, ಸಹಾಯಕ ಆಯುಕ್ತರು ಮತ್ತು ತಹಸೀಲ್ದಾರರ ಸಭೆ ಅಧ್ಯಕ್ಷತೆವಹಿಸಿದ್ದ ಸಚಿವ ರಾಮಲಿಂಗರೆಡ್ಡಿ ಮಾತನಾಡಿ ಪ್ರಮುಖ ದೇವಾಲಯಗಳ ಸೇವೆ, ಕೊಠಡಿಗಳ ಬುಕ್ಕಿಂಗ್‌ಗೆ ಆನ್‌ಲೈನ್‌ನಲ್ಲಿ ಅವಕಾಶ ಕಲ್ಪಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲು ನಿರ್ದೇಶಿಸಿದರು.
ಪ್ರಮುಖ ದೇವಾಲಯಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಗೃಹ ಮುಂತಾದ ಮೂಲಸವಲತ್ತು ಒದಗಿಸುವ ಕಾರ್ಯವನ್ನು ಎರಡು ತಿಂಗಳೊಳಗೆ ಕೈಗೆತ್ತಿಕೊಳ್ಳಲು ತಾಕೀತು ಮಾಡಿದರು.
ಶಕ್ತಿ ಯೋಜನೆಯಿಂದಾಗಿ ದೇವಾಲಯಗಳಿಗೆ ಬರುವ ಭಕ್ತ ಸಂಖ್ಯೆ ಏರಿಕೆಯಾಗಿದೆ. ದರ್ಶನಕ್ಕೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಈ ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಿ ಸೂಕ್ತ ಸಲಹೆ ನೀಡಬೇಕು ಎಂದು ಹೇಳಿದರು.
ಪ್ರಮುಖ ದೇವಾಲಯಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ, ಎಲ್ಲ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ ನೇರ, ಸುಗಮವಾಗಿ ದೇವರ ದರ್ಶನದ ವ್ಯವಸ್ಥೆ ಮಾಡಬೇಕು.ಎಲ್ಲ ದೇವಾಲಯಗಳಲ್ಲಿ ಹುಂಡಿಗಳನ್ನು ಅಳವಡಿಸುವುದು ಕಡ್ಡಾಯ. ಈ ಹುಂಡಿಗಳನ್ನು ಭಕ್ತರಿಗೆ ಕಾಣುವ ಸ್ಥಳದಲ್ಲಿ ಸ್ಥಾಪಿಸಿ, ಸೂಚನಾ ಫಲಕಗಳನ್ನು ಹಾಕಬೇಕು ಎಂದು ರಾಮಲಿಂಗರೆಡ್ಡಿ ಸೂಚಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 9 =
Remember me
