ಬೆಂಗಳೂರು:ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡರೆ ಬ್ಯಾಂಕ್‌ನಂತಹ ಸಂಸ್ಥೆಗಳು ಅಭಿವೃದ್ದಿ ಹೊಂದಲು ಸಾಧ್ಯ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದರು.
ಬಸವನಗುಡಿಯ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕರಿಗೆ ಹೊರತಂದಿರುವ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯ ಉದ್ಘಾಟಿಸಿ ಮಾತನಾಡಿದರು.
ಕರೊನಾದಿಂದ ಜಗತ್ತು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಜತೆ ಸ್ಪರ್ಧೆ ನಡೆಸುವ ಸಹಕಾರ ಬ್ಯಾಂಕ್​ಗಳು ಆಧುನಿಕ ತಂತ್ರಜ್ಞಾನನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಹಕರಿಗೆ ಉತ್ತಮ ಸೌಲಭ್ಯ ಒದಗಿಸಲು ಮುಂದಾಗಿರುವುದು ಸಂತಸದ ವಿಚಾರ. ಆಧುನಿಕತೆ ಅಳವಡಿಸಿಕೊಳ್ಳುವುದು ಎಲ್ಲ ಸಂಸ್ಥೆಗಳಿಗೂ ಅನಿವಾರ್ಯ. ಜಗತ್ತಿನ ವೇಗದ ಜತೆ ಹೆಜ್ಜೆ ಹಾಕದಿದ್ದಲ್ಲಿ ಸಂಸ್ಥೆಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮನು ಬಳಿಗಾರ್ ಅಭಿಪ್ರಾಯಪಟ್ಟರು.
ಚರಣ್ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಿ.ವಿ. ದ್ವಾರಕಾನಾಥ್ ಮಾತನಾಡಿ, ಆಧುನಿಕ ತಂತ್ರಜ್ಞಾನ ಮೂಲಕ ಗ್ರಾಹಕರಿಗೆ ಹೊಸ ಯೋಜನೆ ನೀಡುವುದು ಬ್ಯಾಂಕಿನ ಪ್ರಮುಖ ಆದ್ಯತೆ. ಮೊಬೈಲ್ ಬ್ಯಾಂಕಿಂಗ್ ಸೇವೆಯಲ್ಲಿ ಗ್ರಾಹಕರಿಗೆ 24 ಗಂಟೆ ಬ್ಯಾಂಕ್ ಖಾತೆ ಮತ್ತು ಹಣ ವರ್ಗಾವಣೆ ಮತ್ತಿತರರ ಮಾಹಿತಿಗಳು ಸಿಗಲಿವೆ ಎಂದರು.
ನ.17ಕ್ಕೆ ಕಾಲೇಜು ಆರಂಭ, ತರಗತಿಗೆ ಬರೋದು-ಬಿಡೋದು ವಿದ್ಯಾರ್ಥಿಗಳಿಗೆ ಬಿಟ್ಟದ್ದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
