
ಬೆಂಗಳೂರು:ದೇಶದ ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅಲೆ ಎದ್ದಿದೆ. ದೇಶವೇ ಮೋದಿ ಅವರತ್ತ ಭರವಸೆಯಿಂದ ನೋಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಿವೃತ್ತ ಕೆ.ಎ.ಎಸ್ ಅಧಿಕಾರಿ ಆರ್.ರುದ್ರಯ್ಯ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದರು.ರಾಜ್ಯದಲ್ಲಿ ಕಳೆದ ಬಾರಿ 25 ಲೋಕಸಭಾ ಸ್ಥಾನ ಗೆದ್ದಿದ್ದೆವು. ಈ ಬಾರಿ ಅದನ್ನು ಮೀರಿ ಅದಕ್ಕಿಂತ ಹೆಚ್ಚು ಸೀಟುಗಳನ್ನು ಪಕ್ಷ ಗೆಲ್ಲಲಿದೆ ಎಂದರು. ತೆಲಂಗಾಣ, ಆಂಧ್ರ, ತಮಿಳುನಾಡಿನಲ್ಲೂ ಅತಿ ಹೆಚ್ಚು ಸೀಟು ಸಿಗಲಿದೆ ಎಂದರು.
ದಲಿತರಿಗೆ ಭ್ರಮನಿರಸನಎಸ್‌ಸಿ, ಎಸ್‌ಟಿ ಸೇರಿದಂತೆ ಕಾಂಗ್ರೆಸ್ ಮತಬ್ಯಾಂಕಿನಂತಿದ್ದ ಎಲ್ಲ ಸಮುದಾಯಗಳು ಭ್ರಮನಿರಸನಗೊಂಡಿವೆ. ದಲಿತರ ಅಭಿವೃದ್ಧಿಗಾಗಿ ಮೀಸಲಾದ ಸುಮಾರು 11,300 ಕೋಟಿ ಹಣವನ್ನು ಗ್ಯಾರಂಟಿ ಸ್ಕೀಮಿಗೆ ಕೊಟ್ಟಿರುವುದು ನ್ಯಾಯವೇ? ಆ ಮೂಲಕ ದಲಿತರನ್ನು ವಂಚಿತರನ್ನಾಗಿ ಮಾಡಿದ್ದಾರಲ್ಲವೇ ಎಂದು ಕೇಳಿದರು.
ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಬಿಜೆಪಿ ಮಾಡಿದ ಸಾಧನೆ, ಅಭಿವೃದ್ಧಿ ಕಾರ್ಯವನ್ನು ಜನರಿಗೆ ತಿಳಿಸಬೇಕು. ಆಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದರು. ಡಾ.ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿದ್ದು, ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಜಾಗವನ್ನು ಕೊಡಲಿಲ್ಲ. ಇದೆಲ್ಲ ಸಂಗತಿಗಳನ್ನು ಜನರಿಗೆ ತಿಳಿಸಬೇಕು. ಅಂಬೇಡ್ಕರರನ್ನು ಅವಮಾನ ಮಾಡಿದವರಿಗೆ ಗೌರವ ಕೊಟ್ಟದ್ದನ್ನು ತಿಳಿಸಬೇಕು. ಪಂಚಕ್ಷೇತ್ರ ಅಭಿವೃದ್ಧಿ, ಭಾರತರತ್ನ ನೀಡಿದ್ದನ್ನು ನೆನಪಿಸಬೇಕು ಎಂದರು.ಕಾಂಗ್ರೆಸ್ ಕುಟುಂಬವನ್ನೇ ನೆಚ್ಚಿಕೊಂಡ ಪಕ್ಷ. ಬಿಜೆಪಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುವ ಪಕ್ಷ. ದೀನ ದಲಿತರ ವಿರೋಧಿಯಾಗಿರುವ ಕಾಂಗ್ರೆಸ್ಸಿಗೆ ಧಿಕ್ಕಾರ ಹಾಕಬೇಕು ಎಂದರು.
ಸಂಸದ ಎಸ್.ಮುನಿಸ್ವಾಮಿ, ರಾಯಚೂರು ಜಿಲ್ಲಾ ಅಧ್ಯಕ್ಷ ಸುರೇಶ್ ಪಾಟೀಲ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು. ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು. ಕಲಬುರ್ಗಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ್ ಪಾಟೀಲ್ ಸ್ವಾಗತ ಕೋರಿದರು.ಬಾಕ್ಸ್
ಜನಸೇವೆಯ ರುದ್ರಯ್ಯಸರ್ಕಾರಿ ಸೇವೆಯಲ್ಲಿದ್ದರೂ, ರುದ್ರಯ್ಯ ದಕ್ಷ ಅಧಿಕಾರಿಯಾಗಿ ಕೆಲಸ ಮಾಡುವ ಮೂಲಕ ಜನಪ್ರೀತಿ ಪಡೆದವರು. ಅವರು ಬಿಜೆಪಿ ತತ್ವ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದನ್ನು ಸ್ವಾಗತಾರ್ಹ ಬೆಳವಣಿಗೆಯಾಗಿದೆ.-ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ
ಕಮಲ ಹಿಡಿದ ರುದ್ರಯ್ಯನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ ಧ್ವಜ ನೀಡುವ ಮೂಲಕ ರುದ್ರಯ್ಯ ಅವರನ್ನುಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಮುನಿಸ್ವಾಮಿ, ವಕ್ತಾರ ಛಲವಾದಿ ನಾರಾಯಣಸ್ವಾಮಿ ಸ್ವಾಗತಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
