ಕಲಬುರಗಿ:ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಕಳೆದ ವಾರ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಗುರುವಾರ) ಕಲ್ಯಾಣ ಕರ್ನಾಟಕಕ್ಕೆ ಆಗಮಿಸಿ ಮಹತ್ತರ ಯೋಜನೆಗಳಿಗೆ ಯಾದಗಿರಿ ಜಿಲ್ಲೆಯಲ್ಲಿ ಚಾಲನೆ ನೀಡಿದ್ದಾರೆ. ಇದೀಗ ಕಲಬುರಗಿಗೆ ಆಗಮಿಸಿರುವ ಮೋದಿ, ಮಳಖೇಡದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಲಬುರಗಿ, ಬೀದರ್​, ಯಾದಗಿರಿ, ವಿಜಯಪುರ, ಕೊಪ್ಪಳ, ರಾಯಚೂರು ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಮೋದಿ ಹಕ್ಕುಪತ್ರ ವಿತರಿಸಲಿದ್ದಾರೆ. ಇದು ಗಿನ್ನೆಸ್​ ದಾಖಲೆಯಾಗಲಿದೆ.
ನರೇಂದ್ರ ಮೋದಿ ಅವರನ್ನ ಕಣ್ತುಂಬಿಕೊಳ್ಳಲು ಯಾದಗಿರಿಯಲ್ಲೂ ಲಕ್ಷಾಂತರ ಜನ ಸೇರಿದ್ದರು. ಕಲಬುರಗಿಯ ಮಳಖೇಡದಲ್ಲೂ ಜನಸಾಗರವೇ ಹರಿದುಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೊಡೇಕಲ್​-ನಾರಾಯಣಪುರ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ಕಾಡಾ ಗೇಟ್​ಗಳ ಲೋಕಾರ್ಪಣೆ ಮತ್ತು ಚೆನ್ನೈ-ಸುರತ್​ ಎಕ್ಸ್​ಪ್ರೆಸ್​ ವೇ ಕಾರಿಡಾರ್​ಗೆ ಭೂಮಿಪೂಜೆ, ನಾರಾಯಣಪುರದ ಬಸವಸಾಗರ ಜಲಾಶಯದ ಕಾಲುವೆಗೆ ನಿರ್ಮಿಸಿದ ಸ್ಕಾಡಾ ತಂತ್ರಜ್ಞಾನದ ಗೇಟ್​ಗಳನ್ನು ರಾಷ್ಟ್ರಕ್ಕೆ ಸಮರ್ಪಣೆ ಸೇರಿದ್ದಂತೆ ಹಲವು ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಯಾದಗಿರಿಯಲ್ಲಿ 5104 ಕೋಟಿ ರೂ. ಮೊತ್ತದ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

3 ವರ್ಷದ ಹಿಂದಷ್ಟೇ ಮದ್ವೆಯಾಗಿದ್ದ ದಂಪತಿ ಬದುಕಿಗೆ ಕೊಳ್ಳಿ ಇಟ್ಟ ಕಟ್ಟೆ! ತುರುವೇಕೆರೆಯಲ್ಲಿ ದುರ್ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 3 =
Remember me
