ಬೆಂಗಳೂರು:ವಿದೇಶದಲ್ಲಿರುವ 3 ಟ್ರಿಲಿಯನ್ ಕಪ್ಪು ಹಣವನ್ನು ತರಲು ಕೇಂದ್ರ ಸರ್ಕಾರವು ಸೂಕ್ತ ಕ್ರಮ ಕೈಗೊಂಡಿಲ್ಲ. ಸೋನಿಯಾ ಗಾಂಧಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಹೆದರುತ್ತಿದ್ದಾರೆ ಎಂದು ಬಿಜೆಪಿ ನಾಯಕ. ಅರ್ಥಶಾಸ್ತ್ರಜ್ಞ ಡಾ. ಸುಬ್ರಮಣಿಯನ್ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ವಿರಾಟ್ ಹಿಂದೂಸ್ತಾನ್ ಸಂಘಟನೆ ಆಯೋಜಿಸಿದ್ದ ಶ್ರೀ ಅಯ್ಯರ್ ಮತ್ತು ಜಗದೀಶ್ ಶೆಟ್ಟಿ ರಚಿತ ‘ಪೇಪರ್ ಇನ್ ಮನಿ ಔಟ್’ ಎಂಬ ಪುಸ್ತಕ ಬಿಡುಗಡೆಗೊಳಿಸಿದ ಬಳಿಕ ಅವರು ಮಾತನಾಡಿದರು.
ಹಲವು ರಾಷ್ಟ್ರಗಳು ವಿಶ್ವಸಂಸ್ಥೆಯ ಮೂಲಕ ತಮ್ಮ ರಾಜಕಾರಣಿಗಳು ವಿದೇಶಿ ಬ್ಯಾಂಕ್‌ಗಳಲ್ಲಿ ಹೊಂದಿದ್ದ ಕಪ್ಪು ಹಣವನ್ನು ವಾಪಾಸ್ ತಂದಿವೆ. ಇದೇ ಮಾರ್ಗ ಅನುಸರಿಸುವಂತೆ ನಾನು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೆ. ಆದರೆ, ಅವರು ಕಪ್ಪು ಹಣ ತರಲು ಉತ್ಸಾಹ ತೋರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮ ಆರ್ಥಿಕ ಸಚಿವಾಲಯ ಪ್ರಧಾನ ಮಂತ್ರಿ ಕಚೇರಿಯ ನಿರ್ದೇಶನಗಳಂತೆ ಕಾರ್ಯ ನಿರ್ವಹಿಸುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಇಲಾಖೆಯ ಮೇಲೆ ಹಿಡಿತ ಇಲ್ಲವಾಗಿದೆ. ಇಡೀ ಸಚಿವಾಲಯವನ್ನು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿಗಳು ಮುನ್ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
