ಮೈಸೂರು:ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಭಾರೀ ಹಣಾಹಣಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್​.ಎಲ್​. ಬೈರಪ್ಪನವರು ಮಾತನಾಡಿದರು.
ಇದನ್ನೂ ಓದಿ:‘ನಾನು ಸ್ಟಾರ್ ಅಲ್ಲ, ನಿಮ್ಮ ಮನೆ ಮಗಳು’: ನಟಿ ಕಂಗನಾ ರಣಾವತ್​ಗೆ ಅದ್ದೂರಿ ಸ್ವಾಗತ
ಇಂದು ಮೈಸೂರಿನಲ್ಲಿ ಮಾತನಾಡಿದ ಹಿರಿಯ ಸಾಹಿತಿ, “ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. ಅದು ಖಚಿತ. ಆದರೆ, ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಗೆಲ್ಲೋದು ಅರ್ಧದಷ್ಟು ಮಾತ್ರ! ರಾಜ್ಯದಲ್ಲಿ ಕಮಲ ಹೆಚ್ಚು ಸ್ಥಾನಗಳನ್ನು ಗೆಲ್ಲೋದು ಕಷ್ಟ” ಎಂದು ಭವಿಷ್ಯ ನುಡಿದರು.
“ಕರ್ನಾಟಕದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಇಲ್ಲಿ ಕಮಲ ಬಹಳ ವೀಕ್ ಆಗಿದೆ. ಉತ್ತರಪ್ರದೇಶದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದ್ದಿದ್ದರೇ ಹೆಚ್ಚಿನ ಸೀಟು ಗೆಲ್ಲಬಹುದಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇರಲಿಲ್ಲ.ಅದೇ ಕಾರಣದಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿತು. ಆದರೀಗ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತವಿದೆ. ಈ ಬಾರಿಯ ಚುನಾವಣೆಯಲ್ಲಿ ಮೋದಿ ಅಲೆ ಕಡಿಮೆ ಆಗಿದೆಯಾ ಎಂಬುದು ಗೊತ್ತಿಲ್ಲ” ಎಂದರು.
ಶ್ರೀಲೀಲಾ ಜತೆ ನಟಿಸಲು ಸ್ಟಾರ್​ ನಟರಿಗೆ ಚಿಂತೆ! ಇದು ಮುಂದುವರಿದ್ರೆ ‘ಕಿಸ್’​ ಬೆಡಗಿಗೆ ಸಂಕಷ್ಟ

ಅಂದು RCB 263… ಇಂದು SRH 277! ಎರಡು ದಾಖಲೆಯ ಸಮಯದಲ್ಲೂ ತಂಡದಲ್ಲಿದ್ದ ಏಕೈಕ ಆಟಗಾರ ಇವರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
