ಬೆಂಗಳೂರು:ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ಹುಟ್ಟುಹಬ್ಬ, ಅವರಿಗೆ ನಾನು ಶುಭಾಶಯ ಕೋರುತ್ತೇನೆ. ಆದರೆ, ಹುಟ್ಟುಹಬ್ಬಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಪತ್ರಿಕೆಗಳಿಗೆ ಪುಟಗಟ್ಟಲೆ ಜಾಹಿರಾತು ನೀಡಲಾಗಿದೆ. ಮೋದಿಯವರು ಭಾರಿ ಸಾಧನೆ ಮಾಡಿದ್ದಾರೆ ಎಂದು ಜಾಹಿರಾತಿನಲ್ಲಿ ಬಿಂಬಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ನೋಟು ಅಮಾನ್ಯ, ಅವೈಜ್ಞಾನಿಕ ಜಿಎಸ್‌ಟಿ ಹಾಗೂ ಕೆಟ್ಟ ಹಣಕಾಸು ನೀತಿಯಿಂದಾಗಿ ದೇಶ ಆರ್ಥಿಕವಾಗಿ ಭಾರಿ ಕೆಳಮಟ್ಟಕ್ಕೆ ಹೋಗಿದೆ. ಜಿಡಿಪಿಯೂ ಭಾರಿ ಕುಸಿತ ಕಂಡಿದೆ. ಇದರಿಂದ ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಕೃಷಿ ವಲಯ ಹೊರತುಪಡಿಸಿ ಬೇರೆ ಎಲ್ಲ ಕ್ಷೇತ್ರಗಳ ಬೆಳವಣಿಗೆ ನಕಾರಾತ್ಮಕವಾಗಿದೆ ಎಂದರು.
ನರೇಂದ್ರಮೋದಿ ಭಾರಿ ಬದಲಾವಣೆ ತರಲಿದ್ದಾರೆ ಎಂದು ಯುವಕ, ಯುವತಿಯರು ಅವರನ್ನು ಬೆಂಬಲಿಸಿದರು. ಆದರೆ ಈಗ ಉದ್ಯೋಗ ಸಿಗದೆ ಪರದಾಡುತ್ತಿದ್ದಾರೆ. ಹೀಗಾಗಿ ಅವರು ಮೋದಿಯವರ ಹುಟ್ಟುಹಬ್ಬವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿರುವುದು ಸರಿಯಾಗಿದೆ. ನಿರಾಶರಾಗುವುದು, ಭ್ರಮನಿರಸನಗೊಳ್ಳುವುದು ಬೇಡ ಎಂದು ಯುವ ಜನರಿಗೆ ಮನವಿ ಮಾಡುತ್ತೇನೆ ಎಂದರು.
‘ಮೋದಿ’ ಜನ್ಮದಿನಕ್ಕೆ 70 ಗೋವುಗಳ ಪೂಜೆ ಮಾಡಿದ್ದೇಕೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 4 =
Remember me
