ಬೆಂಗಳೂರು:ಧನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರ ಖಾತೆಗೆ ಪ್ರಸ್ತುತ ತಿಂಗಳಿನ 2ನೇ ಕಂತು ಹಣ ಸಂದಾಯವಾಗುತ್ತಿದೆ.
ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿಂದ ಒಟ್ಟು 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಲಾನುಭವಿಗಳಿಗೆ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆ ಮಾಹಿತಿ ನೀಡಿದೆ.
ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ವರ್ಗಾವಣೆ ವ್ಯವಸ್ಥೆಯು ರಾಜ್ಯದಲ್ಲಿ ಜು.10ರಿಂದ ಜಾರಿಗೆ ಬಂದಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರದಿಂದ (ಎನ್‌ಐಸಿ) ಫಲಾನುಭವಿಗಳ ಮಾಹಿತಿಯನ್ನು ಇ-ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಡಿಬಿಟಿ ಪೋರ್ಟಲ್ ಹಾಗೂ ಖಜಾನೆ ಇಲಾಖೆಯ ಕೆ2 ಪೋರ್ಟಲ್ ಮೂಲಕ ಬಿಪಿಎಲ್ ಕಾರ್ಡ್‌ನಲ್ಲಿರುವ ಪ್ರತಿ ಸದಸ್ಯನಿಗೆ ಕೆಜಿಗೆ 34 ರೂ.ನಂತೆ 5 ಕೆಜಿ ಅಕ್ಕಿಗೆ 170 ರೂ.ನಗದು ಹಣವನ್ನು ಡಿಬಿಟಿ ಮುಖೇನ ಕುಟುಂಬದ ಮುಖ್ಯಸ್ಥರ ಖಾತೆಗೆ ಹಾಕಲಾಗತ್ತಿದೆ. ಅದೇರೀತಿ, ಅಂತ್ಯೋದಯ ಕಾರ್ಡ್‌ನಲ್ಲಿರುವ ನಾಲ್ಕು ಸದಸ್ಯರಿದ್ದರೆ ಕುಟುಂಬಕ್ಕೆ 170 ರೂ, ಐದು ಸದಸ್ಯರಿದ್ದರೆ 510 ರೂ, ಆರು ಸದಸ್ಯರಿದ್ದರೆ 850 ರೂ. ಹಣ ಹಾಕಲಾಗುತ್ತಿದೆ.
ಇದನ್ನೂ ಓದಿ:ಪಾಲಿಕೆ ಪ್ರಯೋಗಾಲಯ ಕಚೇರಿಯಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಇರಲಿಲ್ಲ
ಅಕ್ಕಿ ಬದಲು ಹಣ ನೀಡುವ ಯೋಜನೆ ಸಂಬಂಧಪಟ್ಟಂತೆ ಈಗಾಗಲೇ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಕುಟುಂಬದ ಮುಖ್ಯಸ್ಥರು ಬ್ಯಾಂಕ್ ಖಾತೆ ಹೊಂದಿಲ್ಲದಿದ್ದರೆ, ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಿರದಿದ್ದರೆ, ಖಾತೆ ಲಭ್ಯ ಇಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿದ ನಂತರ ಹಾಗೂ ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜಿವಗೊಳಿಸಿದ ನಂತರ ನಗದು ಸೌಲಭ್ಯ ದೊರೆಯಲಿದೆ. ಮುಖ್ಯಸ್ಥರನ್ನು ನಿಗದಿಪಡಿಸದ ಕುಟುಂಬಗಳು ಮುಖ್ಯಸ್ಥರನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದಗಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಕುಟುಂಬಗಳು, ಮಹಿಳೆಯನ್ನು ಕುಟುಂಬದ ಮುಖ್ಯಸ್ಥರನ್ನಾಗಿ ನೇಮಿಸಬೇಕು. ಕುಟುಂಬದ ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿಗಳ ವಿವರ ನ್ಯಾಯಬೆಲೆ ಅಂಗಡಿಗಳಿಗೆ ಒದಗಿಸಬೇಕು. ಬಳಿಕ ಅವರಿಗೆ ಸೌಲಭ್ಯ ದೊರೆಯಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + 8 =
Remember me
