ಬೆಂಗಳೂರು:ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್​ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ರೂ.ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿ ದೊರೆತಿದೆ.
ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್​ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್​ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಇತ್ತ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ಈಗಾಗಲೆ ನೋಟಿಸ್ ನೀಡಿದ್ದರೂ ಕೂಡ ಪ್ರಜ್ವಲ್​ ರೇವಣ್ಣ ಮಾತ್ರ ಹಾಜರಾಗುತ್ತಿಲ್ಲ. ವಿದೇಶದಲ್ಲೇ ಕಾಲ ಕಳೆಯುತ್ತಿದ್ದಾರೆ. ಹೀಗಾಗಿ ಪ್ರಜ್ವಲ್​ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ಎಸ್​ಐಟಿ ಪ್ಲ್ಯಾನ್ ಮಾಡಿದೆ.
Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
