ಬೆಂಗಳೂರು:ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು ಲಕ್ಷಣ ಹೊಂದಿರುವ ಶಂಕಿತ ಪ್ರಕರಣವೊಂದು ಪತ್ತೆಯಾಗಿದ್ದು, ವ್ಯಕ್ತಿಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್‌ಐವಿ)ಗೆ ಕಳುಹಿಸಲಾಗಿದೆ.
ಆಫ್ರಿಕದ ಇಥಿಯೋಪಿಯಾ ಮೂಲದ 55 ವರ್ಷದ ವ್ಯಕ್ತಿಯಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಈತ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗಾಗಿ ಜು. 4ರಂದು ರಾಜ್ಯಕ್ಕೆ ಆಗಮಿಸಿದ್ದರು. ಬೆಂಗಳೂರಿನ ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಇವರನ್ನು ನಿತ್ಯ ಡಯಾಲಿಸಿಸ್‌ಗೆ ಒಳಪಡಿಸಲಾಗುತ್ತಿತ್ತು. ಕೆಲ ದಿನಗಳಿಂದ ವ್ಯಕ್ತಿಯ ಮೈಮೇಲೆ ಸಣ್ಣ ಗುಳ್ಳೆಗಳು ಹರಡಿಕೊಂಡಿದ್ದು, ಅದು ಮಂಕಿಪಾಕ್ಸ್ ಲಕ್ಷಣಗಳೆಂದು ವೈದ್ಯರು ಗುರುತಿಸಿ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಶಂಕಿತ ವ್ಯಕ್ತಿಯ ದೇಹದ ರಕ್ತದ ಮಾದರಿ, ಗಂಟಲ ದ್ರವ, ಗುಳ್ಳೆಗಳ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಆ ವ್ಯಕ್ತಿಯ ಜೊತೆಗೆ ಬಂದಿರುವ ಸಹೋದರ ಮತ್ತು ಸಹೋದರಿಯನ್ನು ಪ್ರಾಥಮಿಕ ಸಂಪರ್ಕಿತರು ಎಂದು ಪರಿಗಣಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮೂವರು ಖಾಸಗಿ ಆಸ್ಪತ್ರೆಯಲ್ಲಿಯೇ ನಿಗಾದಲ್ಲಿದ್ದಾರೆ.
ಪುಣೆ ಎನ್‌ಐವಿ ಯಿಂದ ವರದಿ:ಬೆಂಗಳೂರಿನಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್‌ಐವಿ) ಮತ್ತು ವಿಕ್ಟೋರಿಯಾ ಪ್ರಯೋಗಾಲಯಲ್ಲಿ ಮಂಕಿಪಾಕ್ಸ್ ಪರೀಕ್ಷೆ ನಡೆಸುವ ಸೌಲಭ್ಯವಿದೆ. ಖಾತ್ರಿ ಪಡಿಸಿಕೊಳ್ಳಲು ಪರೀಕ್ಷಾ ವರದಿ ಮತ್ತು ಮಾದರಿಯನ್ನು ಪುಣೆಯ ಎನ್‌ಐವಿಗೆ ಕಳುಹಿಸಲಾಗಿದ್ದು, 72 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರೀಕ್ಷೆ ನಡೆಸಬೇಕಿದೆ. ಇನ್ನೆರಡು ದಿನಗಳಲ್ಲಿ ವರದಿ ಲಭ್ಯವಾಗಬಹುದು ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.
ಮಂಕಿಪಾಕ್ಸ್ ಚಿಕನ್​ ಪಾಕ್ಸ್ ರೀತಿಯಲ್ಲೇ ಇದ್ದು, ಸ್ವಲ್ಪ ಗಂಭೀರವಾಗಿರುತ್ತದೆ ಅಷ್ಟೇ. ಅದೇನೂ ಮಾರಣಾಂತಿಕ ಕಾಯಿಲೆ ಅಲ್ಲ. ಚಿಕಿತ್ಸೆ ನೀಡಿದರೆ ಗುಣ ಹೊಂದಬಹುದು. ಹಾಗಾಗಿ ಆತಂಕ ಪಡುವ ಬದಲು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯ ಪತ್ತೆಯಾಗಿರುವ ಶಂಕಿತ ವ್ಯಕ್ತಿಯನ್ನು ಪ್ರತ್ಯೇಕ ನಿಗಾದಲ್ಲಿರಿಸಿ ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬರಬೇಕಿದೆ.
|ಡಾ. ಕೆ. ಸುಧಾಕರ್ಸಚಿವರು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
ಮೊದಲ ಶಂಕಿತ ವ್ಯಕ್ತಿ ವರದಿ ನೆಗೆಟಿವ್:ಕೆಲ ದಿನಗಳ ಹಿಂದೆ ಇಂಗ್ಲೆಂಡ್‌ನಿಂದ ವಾಪಸ್ ಆಗಿದ್ದ ಬೆಂಗಳೂರು ಮೂಲದ ವ್ಯಕ್ತಿಯಲ್ಲೂ ಮಂಕಿಪಾಕ್ಸ್​ ರೋಗ ಲಕ್ಷಣಗಳು ಕಂಡು ಬಂದಿದ್ದವು. ಕೂಡಲೇ ಆತನ ಮಾದರಿಯನ್ನು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಆದರೆ, ವರದಿ ನೆಗೆಟಿವ್ ಬಂದಿದ್ದರಿಂದ ಆತಂಕ ದೂರವಾಗಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಿಗೆ ಸೂಚನೆ:ವಿದೇಶಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ನಿಗಾವಹಿಸಲು, ಪ್ರಾಥಮಿಕ ತಪಾಸಣೆ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕು ಲಕ್ಷಣ ಹೊಂದಿರುವ ಶಂಕಿತರು ಪತ್ತೆಯಾದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಆ ವ್ಯಕ್ತಿಗಳ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಎನ್‌ಐವಿ ಪ್ರಯೋಗಾಲಯಕ್ಕೆ ರವಾನಿಸಬೇಕು. ವರದಿ ಬರುವವರೆಗೂ ಶಂಕಿತರು ಹಾಗೂ ಅವರ ಪ್ರಾಥಮಿಕ ಸಂಪರ್ಕಿತರನ್ನು ನಿಗಾದಲ್ಲಿ ಇರಿಸುವಂತೆ ಸೂಚಿಸಿದೆ.
2 ಬೈಕ್​​​ಗಳ ಮಧ್ಯೆ ಭೀಕರ ಅಪಘಾತ; ಎರಡೂ ಬೈಕ್​ ಸವಾರರ ತಲೆಗೆ ಪೆಟ್ಟು, ಒಂದೇ ಹೆಸರಿನ ಇಬ್ಬರೂ ಸಾವು..

ಕಾಮನ್‌ವೆಲ್ತ್ ಗೇಮ್ಸ್, ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 6 =
Remember me
