ಉಡುಪಿ:ಮೂಕಪ್ರಾಣಿಗಳ ಮೇಲೆ ಮೃಗೀಯ ವರ್ತನೆ ಹೆಚ್ಚುತ್ತಲೇ ಇದೆ. ಕಳೆದ ವರ್ಷ ನೂರಾರು ಮಂಗಗಳ ಮಾರಣಹೋಮ ನಡೆದಿತ್ತು. ಈಗಲೂ ಆ ಕೃತ್ಯ ಮುಂದುವರಿದಿದ್ದು, ಕಿಡಿಗೇಡಿಗಳು ಎರಡು ಗೋಣಿ ಚೀಲಗಳಲ್ಲಿ ಕೋತಿಗಳ ಮೃತದೇಹಗಳನ್ನು ತುಂಬಿ ಕಾಡಿನಲ್ಲಿ ಬಿಸಾಕಿ ಹೋಗಿದ್ದಾರೆ.
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ಸೆಣಬಿನ ಗೋಣಿಚೀಲಗಳು ಪತ್ತೆಯಾಗಿವೆ. ಇದನ್ನು ಕಂಡ ಸ್ಥಳೀಯರು ತೆರೆದು ನೋಡಿದಾಗ ಸುಮಾರು 20 ಕೋತಿಗಳ ಶವಗಳು ಅದರಲ್ಲಿ ಇದ್ದವು.ಇದನ್ನೂ ಓದಿರಿಭಾರತಕ್ಕೆ ಅಭಿನಂದನೆಗಳು ನನ್ನ ಮಗನನ್ನು ಬಂಧಿಸಿದ್ದೀರಿ: ರಿಯಾ ತಂದೆಯ ನೋವಿನ ಮಾತು!
ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ಕಿಡಿಗೇಡಿಗಳು ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. ಸುತ್ತಮುತ್ತಲ ತೋಟಗಳಿಗೆ ಮಂಗಗಳು ಬರುವುದು ಸಾಮಾನ್ಯ. ರೈತರಿಗೆ ಉಪಟಳ ಜಾಸ್ತಿಯಾದಾಗ ವಿಷವಿಟ್ಟು ಮಂಗಗಳನ್ನು ಕೊಂದಿರುವ ಸಾಧ್ಯತೆ ಇದೆ. ಕಳೆದ ವರ್ಷವೂ ನೂರಾರು ಸಂಖ್ಯೆಗಳಲ್ಲಿ ಕೋತಿಗಳ ಮಾರಣಹೋಮ ನಡೆದಿತ್ತು.
ಶಿವಮೊಗ್ಗ ಜಿಲ್ಲೆಯಲ್ಲಿ ದುಷ್ಕೃತ್ಯ ಎಸಗಿ ನಾಡ್ಪಾಲು ಸಮೀಪ ಬಿಸಾಕಿ ಹೋಗಿದ್ದಾರೆ ಎನ್ನಲಾಗಿದೆ. ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಡ್ರಗ್ಸ್ ಮಾಫಿಯಾ ಕಾರಣಕ್ಕೆ ಬೆಂಗಳೂರು ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆ ಟೆನ್ಷನ್!

ರೈತನ ಜಮೀನು ಪಡೆದು ಬರೋಬ್ಬರಿ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದ ದುಷ್ಕರ್ಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 12 =
Remember me
