ಬೆಂಗಳೂರು:ಸತತ 15 ದಿನಗಳಿಂದ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮಾರುತಗಳು ಈಗ ಚುರುಕು ಪಡೆದಿರುವುದರ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಬಿರುಸುಗೊಂಡಿದೆ.
ಶುಕ್ರವಾರ ರಾಮನಗರದ ಚಂದುರಯಂಗಹಳ್ಳಿ 88 ಮಿಮೀ, ತುಮಕೂರಿನ ಕುಣಿಗಲ್ 84 ಮಿಮೀ, ದಕ್ಷಿಣಕನ್ನಡದ ಸುಳ್ಯ 51 ಮಿಮೀ, ಬೆಂಗಳೂರು 39 ಮಿಮೀ, ಮಂಡ್ಯ33 ಮಿಮೀ, ಮೈಸೂರಿನ ಸುತ್ತೂರು 33 ಮಿಮೀ ಮತ್ತು ಉತ್ತರ ಕನ್ನಡದ ನಿಲಗುಂದ 28 ಮಿಮೀ ಮಳೆಯಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜೂ. 18ರಂದು ಯೆಲ್ಲೋ ಅಲರ್ಟ್ ಇದ್ದರೆ, ಜೂ 19ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಭಾಗಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಚಿತ್ರದುರ್ಗ, ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಮಾರುತಗಳು ವ್ಯಾಪಿಸಿದ್ದು, ತೇವಾಂಶ ಭರಿತ ಮೋಡಗಳು ಇರುವುದರಿಂದ ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
26 ವರ್ಷಗಳಲ್ಲೇ ಅತ್ಯಧಿಕ ಮಳೆ; ಒಂದೇ ದಿನದಲ್ಲಿ 972 ಮಿ.ಮೀ. ವರ್ಷಧಾರೆ..

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು: ತಲವಾರ್​ನಿಂದ ಕಡಿದು, ತಲೆಯನ್ನೇ ಜಜ್ಜಿ ಕೊಲೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
