ಬೆಂಗಳೂರು:ನೈಋತ್ಯ ಮಾನ್ಸೂನ್ ಶನಿವಾರ ರಾಜ್ಯಕ್ಕೆ ಪ್ರವೇಶಿಸಿದೆ. ಗುರುವಾರ ಕೇರಳಕ್ಕೆ ಆಗಮಿಸಿದ್ದ ಮುಂಗಾರು ಮಾರುತಗಳು ಎರಡು ದಿನದ ಅಂತರದಲ್ಲೇ ಕರ್ನಾಟಕದ ಕರಾವಳಿ ಭಾಗಕ್ಕೆ ಬಂದಿವೆ. ಆದರೆ, ‘ಬಿಪರ್ಜೋಯ್’ ಚಂಡಮಾರುತವು ಮುಂಗಾರಿನ ಮೇಲೆ ಪರಿಣಾಮ ಬೀರಿದ ಕಾರಣ ಕರಾವಳಿ ಭಾಗಕ್ಕೆ ಆಗಮಿಸಿರುವ ಮಾರುತಗಳು ದುರ್ಬಲಗೊಂಡಿದ್ದು, ರಾಜ್ಯಾದ್ಯಂತ ವ್ಯಾಪಿಸಲು ಒಂದು ವಾರ ಬೇಕಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ಕೊಟ್ಟಿದೆ.
ವಾಡಿಕೆಯಂತೆ ಜೂ. 1 ಅಥವಾ ಜೂ. 2ರಂದು ಕೇರಳಕ್ಕೆ ಮಾರುತಗಳು ಆಗಮಿಸಬೇಕಿತ್ತು. ಆದರೆ, ಮುಂಗಾರು ಪೂರ್ವದಲ್ಲಿ ಉಂಟಾಗಿದ್ದ ತೇವಾಂಶ ಕೊರತೆ, ಗಾಳಿ ವೇಗ ಇಲ್ಲದಿರುವುದು, ಮೋಕಾ ಚಂಡಮಾರುತವೂ ತೇವಾಂಶ ಭರಿತ ಮೋಡಗಳನ್ನು ಸೆಳೆದಿರುವುದು ಸೇರಿ ಇತರೆ ಕಾರಣಗಳಿಂದ ವಾಡಿಕೆಯಂತೆ ಆಗಮನವಾಗಬೇಕಿದ್ದ ಮಾರುತಗಳು ಮೇಲೆ ಪರಿಣಾಮ ಬೀರಿದ್ದವು. ಇದರಿಂದಾಗಿ ಮಾರುತಗಳ ಆಗಮನ ವಿಳಂಬವಾಗಿತ್ತು.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಈಗ ‘ಬಿಪರ್ಜೋಯ್’ ಚಂಡಮಾರುತವು ಮುಂಗಾರಿನ ಮೇಲೆ ಪರಿಣಾಮ ಬೀರಿದ್ದ ಪರಿಣಾಮ ಕೇರಳ ಮತ್ತು ಕರ್ನಾಟಕಕ್ಕೆ ವಾಡಿಕೆಗಿಂತ ತಡವಾಗಿ ಮಾರುತಗಳು ಆಗಮಿಸಿವೆ. 2022ರಲ್ಲಿ ವಾಡಿಕೆಯಂತೆ ರಾಜ್ಯಕ್ಕೆ ಮಾರುತಗಳ ಪ್ರವೇಶಿಸಿದರೆ, 2021ರಲ್ಲಿ ಜೂ 6ರಂದು, 2020ರಲ್ಲಿ ಮೇ ಕೊನೆಯ ದಿನದಲ್ಲಿ ಮಾರುತಗಳು ಪ್ರವೇಶಿಸಿದ್ದವು. ಈ ಬಾರಿ ರಾಜ್ಯದಲ್ಲಿ ವಾಡಿಕೆಯಷ್ಟೇ ಮಳೆ ಸುರಿಯಲಿದೆ ಎಂದು ಐಎಂಡಿ ಈಗಾಗಲೇ ಭವಿಷ್ಯ ಹೇಳಿದೆ.
ಇದನ್ನೂ ಓದಿ:ಒಂದು ವರ್ಷದ ಮಗುವನ್ನು ಹೆತ್ತತಾಯಿಯೇ ಬ್ಲೇಡ್​ನಿಂದ ಕೊಯ್ದು ಕೊಂದಳು; ಬಳಿಕ ಸ್ವತಃ ಕತ್ತು ಕೊಯ್ದುಕೊಂಡಳು!
ಕರಾವಳಿಯಲ್ಲಿ ಭಾರಿ ಮಳೆ:ಕರಾವಳಿ ಭಾಗಕ್ಕೆ ಮುಂಗಾರು ಆಗಮಿಸಿದ್ದ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ.11ರಿಂದ ಜೂ.13ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸೈಕ್ಲೋನ್‌ನಿಂದ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಬೀಳುವುದಿಲ್ಲ. ಆದರೆ, ಅರಬ್ಬಿ ಸಮುದ್ರದಲ್ಲಿ ಎತ್ತರದ ಅಲೆಗಳು ಎದ್ದಿವೆ. ಗುಜರಾತ್ ಪೋರಬಂದರ್ ಹಾಗೂ ಕರಾಚಿಯತ್ತ ಮಾರುತಗಳು ಹಾದುಹೋಗಲಿವೆ. ಈ ಹಿನ್ನೆಲೆಯಲ್ಲಿ ಆ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ.
14 ನ್ಯಾಯಮೂರ್ತಿಗಳು ಸೇರಿದಂತೆ 270 ನಿವೃತ್ತ ಹಿರಿಯ ಅಧಿಕಾರಿಗಳಿಂದ ಪ್ರಧಾನಿ ಮೋದಿಗೆ ಪತ್ರ!

32 ವರ್ಷಗಳ ಬಳಿಕ ಮತ್ತೆ ಒಂದಾದ ರಜನಿಕಾಂತ್​-ಅಮಿತಾಭ್​ ಬಚ್ಚನ್​; ಲೈಕಾ ಪ್ರೊಡಕ್ಷನ್ಸ್​ ನಿರ್ಮಾಣದಲ್ಲಿ ತಲೈವಾ 170ನೇ ಸಿನಿಮಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − three =
Remember me
