ಬೆಂಗಳೂರು:ವಾಡಿಕೆಗಿಂತ ಮುನ್ನ ಕೇರಳಕ್ಕೆ ಪ್ರವೇಶಿಸಿರುವ ನೈಋತ್ಯ ಮಾನ್ಸೂನ್​ ಭಾನುವಾರ ರಾಜ್ಯದ ಕರಾವಳಿ ಭಾಗಕ್ಕೆ ಆಗಮಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಎರಡು ದಿನದ ಹಿಂದೆ ಕೇರಳಕ್ಕೆ ಪ್ರವೇಶಿಸಿದ್ದ ಮಾನ್ಸೂನ್​ ತುಸು ದುರ್ಬಲವಾಗಿತ್ತು.ಇದೀಗ ಮಾನ್ಸೂನ್​ ಪ್ರವೇಶಿಸಲು ಪೂರಕ ವಾತಾವರಣ ನಿರ್ಮಾಣವಾಗಿದೆ. ಜೂ 2ರಂದು ರಾಜ್ಯದ ಕರಾವಳಿ ಭಾಗಕ್ಕೆ ಮಾರುತುಗಳು ಆಗಮಿಸಲಿದೆ. ಈ ಕುರಿತು ಸೋಮವಾರ ಅಧಿಕೃತವಾಗಿ ಘೋಷಿಸಲಿದ್ದೇವೆ. ಕರಾವಳಿ,ಮಲೆನಾಡು ಸೇರಿ ರಾಜ್ಯಾದಂತ ಈಗಾಗಲೇ ಉತ್ತಮ ವರ್ಷಧಾರೆಯಾಗುತ್ತಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆ ಬೀಳಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್​.ಪಾಟೀಲ್​ ಹೇಳಿದ್ದಾರೆ.
ಡ್ರೈ ಐ ಸಿಂಡ್ರೋಮ ಸಮಸ್ಯೆಯಿಂದ ಬಳಲುತ್ತಿದ್ದೀರಾ : ನಿವಾರಣೆಗಾಗಿ ಇಲ್ಲಿದೆ ಮನೆಮದ್ದುರಾಜ್ಯದಲ್ಲಿ ಶನಿವಾರದಿಂದ ಮಳೆ ಚುರುಕಾಗಿದೆ.ಬೆಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಮೈಸೂರು, ಮಂಡ್ಯ, ಕೊಡಗು, ಹಾಸನದಲ್ಲಿ ಜೂ 2ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ಘೋಷಿಸಿದೆ. ಜೂ 3ರಂದು ಮೇಲಿನ ಜಿಲ್ಲೆಗಳಲ್ಲಿ ಯೆಲ್ಲೋ ಅರ್ಲಟ್​ ಇರಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ತುಮಕೂರುನಲ್ಲಿ ಮುಂದಿನ ಎರಡು ದಿನ ಹಾಗೂ ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಉಡುಪಿ, ದಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 3 ರಂದು ಯೆಲ್ಲೋ ಅರ್ಲಟ್​ ಇರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 2 =
Remember me
