ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಜೀವಕಳೆ ಬಂದಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಗುರುವಾರ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸರಾಸರಿ 40-50 ಮಿ.ಮೀವರೆಗೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ
ಕೃಷ್ಣೆಯಲ್ಲಿ ಜಲಧಾರೆ:ಮಹಾರಾಷ್ಟ್ರದ ಕೃಷ್ಣಾ ನದಿ ಶ್ರೇಣಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್​ಗೆ ಗುರುವಾರ 44 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರ ಹರಿಬಿಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೊಯ್ನಾ, ರಾಜಾಪುರ ಡ್ಯಾಂ, ಧೂದಗಂಗಾ ನದಿಗಳಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಜೂನ್ ತಿಂಗಳಿನಲ್ಲೇ ಕೃಷ್ಣಾ ನದಿ ಒಡಲು ತುಂಬಿ ಹರಿಯುತ್ತಿದೆ.
ಉಕ್ಕುತ್ತಿರುವ ಸಮುದ್ರ
ಗೋಕರ್ಣದ ಮಹಾಬಲೇಶ್ವರ ಮಂದಿರ ಎದುರಿನ ಮುಖ್ಯ ಸಾಗರ ತೀರದಲ್ಲಿ ಸಮುದ್ರ ಉಕ್ಕಿ ಬಂದು ಕೊರೆತಕ್ಕೆ ಕಾರಣವಾಗಿದೆ. ಬುಧವಾರ ಸಂಜೆಯಿಂದ ಪ್ರಾರಂಭವಾದ ಸಮುದ್ರ ಕೊರೆತ ಗುರುವಾರ ಕೂಡ ಮುಂದುವರಿದಿದೆ. ಸಮುದ್ರ ಮುಂದೆ ಬಂದು 30 ಅಡಿಗೂ ಹೆಚ್ಚಿನ ತೀರ ಪ್ರದೇಶ ಕೊಚ್ಚಿಕೊಂಡು ಹೋಗಿದೆ. ಅಂದಾಜು 50 ಅಡಿ ಉದ್ದ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದೆ. ಕಾರವಾರ, ಅಂಕೋಲಾದಲ್ಲಿ ನಿರಂತರ ಮಳೆಯಿಂದ ಕಾರವಾರ ತಗ್ಗು ಪ್ರದೇಶದಲ್ಲಿ ನೀರು ತುಂಬಿದೆ.
ಬಾಂದಾರ ಜಲಾವೃತ:ಬೆಳಗಾವಿಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿದಿದ್ದರಿಂದ ಚಿಕ್ಕೋಡಿ ಉಪ ವಿಭಾಗದ ಕೆಳ ಹಂತದ 6 ಬ್ರಿಡ್ಜ್ ಕಂ ಬಾಂದಾರಗಳು ಗುರುವಾರ ಜಲಾವೃತಗೊಂಡಿವೆ. ಮಹಾರಾಷ್ಟ್ರದ ಯಾವುದೇ ಜಲಾಶಯದಿಂದ ರಾಜ್ಯಕ್ಕೆ ನೀರು ಹರಿಬಿಡಲಾಗುತ್ತಿಲ್ಲ. ಆದರೂ ಅಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಬುಧವಾರದಂದು ಈ ಭಾಗದ 4 ಸೇತುವೆಗಳು ಮುಳುಗಡೆಯಾಗಿದ್ದವು. ಇದರಿಂದ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ನದಿಗಳ ನೀರಿನ ಮಟ್ಟ ಅಪಾಯದ ಹಂತಕ್ಕೆ ಬರುತ್ತಿದ್ದು, ನದಿ ತೀರದತ್ತ ಕಂದಾಯ, ಪೊಲೀಸ್ ಅಥವಾ ಯಾವುದೇ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿಲ್ಲ. ನದಿ ತೀರದ ಜನರಿಗೆ ಪ್ರವಾಹ ಭೀತಿ ಇದ್ದು ಕೂಡಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ತುಂಗಾ ಜಲಾಶಯ ಭರ್ತಿ:ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು ಗುರುವಾರ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್​ಗಳ ಮೂಲಕ ನದಿಗೆ 2 ಸಾವಿರ ಕ್ಯೂಸೆಕ್ ನೀರು ಹರಿಸಲಾಯಿತು. ತುಂಗಾ ಜಲಾಶಯ 588 ಮೀಟರ್ ನೀರಿನ ಸಾಮರ್ಥ್ಯ ಹೊಂದಿದ್ದು ಈಗ ನೀರಿನ ಪ್ರಮಾಣ 587.69 ಮೀ. ನಷ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರವೇ ನದಿಗೆ ನೀರು ಬಿಡುಗಡೆ ಮಾಡಲಾಯಿತು. ರಾಜ್ಯದಲ್ಲೇ ಅತಿ ಚಿಕ್ಕ ಜಲಾಶಯವಾದ ತುಂಗಾ ಒಂದೆರೆಡು ಬಿರುಸು ಮಳೆಯಾಗುತ್ತಿದ್ದಂತೆ ಭರ್ತಿಯಾಗುತ್ತದೆ.
ಕೊಡಗಿನಲ್ಲಿ ಉತ್ತಮ ಮಳೆ:ಮಡಿಕೇರಿ ತಾಲೂಕಿನ ಭಾಗಮಂಡಲ ವ್ಯಾಪ್ತಿಯಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಸುಂಟಿಕೊಪ್ಪ ಮತ್ತು ಮಡಿಕೇರಿ, ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆಯಿಂದ ಮೋಡಕವಿದ ವಾತಾವರಣದೊಂದಿಗೆ ಆಗೊಮ್ಮೆ ಈಗೊಮ್ಮೆ ತುಂತುರು ಮಳೆಯಾಗಿದೆ.
ಒಳಹರಿವಿನಲ್ಲಿ ಹೆಚ್ಚಳ:ಆಲಮಟ್ಟಿ(ವಿಜಯಪುರ): ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆ ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆ ಕಂಡಿದೆ. ಬುಧವಾರ ಸಂಜೆವರೆಗೆ 9916 ಕ್ಯೂಸೆಕ್ ನೀರು ಒಳಹರಿವು ಇತ್ತು. ಗುರುವಾರ ಬೆಳಗಿನಿಂದ 15,391ಕ್ಯೂಸೆಕ್ ಒಳಹರಿವು ಇದ್ದು, ಒಂದೇ ದಿನದಲ್ಲಿ 5475 ಕ್ಯೂಸೆಕ್ ನೀರು ಹೆಚ್ಚಳವಾಗಿದೆ.
ನಾವಿಕೋತ್ಸವ ಆಗಸ್ಟ್​ 28-30: ವರ್ಚುವಲ್ ಕಾನ್ಫರೆನ್ಸ್​ ಈ ಸಲದ ವಿಶೇಷ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 18 =
Remember me
