ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡಿದೆ. ಬೆಂಗಳೂರು, ಮೈಸೂರಿನ ಹುಣಸೂರು, ಉತ್ತರ ಕನ್ನಡದ ಹಳೇಮಾತೆ, ಕಲ್ಲಬ್ಬೆ, ಬೆಂಗ್ರೆ, ಕೋಲಾರದ ಟಮಕಾ ಸೇರಿ ವಿವಿಧೆಡೆ ಶನಿವಾರವೂ ವರ್ಷಧಾರೆಯಾಗಿದೆ.
ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿಗಿಂತ ಕರಾವಳಿಯಲ್ಲಿ ಮುಂಗಾರು ಇನ್ನಷ್ಟು ಬಿರುಸುಗೊಂಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಜೂ 24ರಿಂದ 28ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಕೊಟ್ಟಿದೆ. ಬೀದರ್, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜೂ 27ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ.
ಇದನ್ನೂ ಓದಿ:ಇಬ್ಬರು ಮಕ್ಕಳ ತಾಯಿಯ ಕುತ್ತಿಗೆಗೆ ಇರಿದು, ತನ್ನ ಕುತ್ತಿಗೆಗೂ ಚುಚ್ಚಿಕೊಂಡ!; ಸಾಯಲೆತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದವನ ಕೃತ್ಯ!
ರಾಜ್ಯದಲ್ಲಿ ವಾಡಿಕೆಗಿಂತ ತಡವಾಗಿ ಆಗಮಿಸಿರುವ ಮುಂಗಾರು ಜೂ. 18ರವರೆಗೆ ದುರ್ಬಲಗೊಂಡಿತ್ತು. ಇದರಿಂದಾಗಿ ಪ್ರಸಕ್ತ ತಿಂಗಳಲ್ಲಿ ಹೇಳಿಕೊಳ್ಳುವಷ್ಟೂ ಮಳೆ ಬಿದ್ದಿಲ್ಲ. ಕೆಲವೆಡೆ ಮಾತ್ರ ಒಂದೆರೆಡು ದಿನಗಳು ಜೋರಾಗಿ ಬಿದ್ದರೆ, ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗಿತ್ತು. ಈಗ ಮುಂಗಾರು ಇನ್ನಷ್ಟು ಚುರುಕುಗೊಂಡಿದ್ದರಿಂದ ಮುಂದಿನ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕಾಡಲ್ಲಿ ಯುವತಿಯ ಶವ ಪತ್ತೆ; ಆಕೆಯ ಮೂವರು ಚಿಕ್ಕಮ್ಮಂದಿರ ಬಂಧನ: ಆಗಿದ್ದೇನು?

70ಕ್ಕೂ ಅಧಿಕ ಚಿನ್ನದ ಪದಕ ಗಳಿಸಿರುವ ‘ಯೋಗಸಂಧ್ಯಾ’; ಹೆಗ್ಗಡೆ-ಬಿಎಸ್​ವೈ ಅವರಿಂದ ಯೋಗರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
