ಬೆಂಗಳೂರು:ಮುಂಗಾರು ಪ್ರವೇಶಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಮುಂಗಾರು ಇನ್ನಷ್ಟು ಬಿರುಸುಗೊಂಡಿದ್ದು, ಈಗಾಗಲೇ ಹಲವೆಡೆ ಉತ್ತಮ ವರ್ಷಧಾರೆಯಾಗುತ್ತಿದೆ. ಬೆಂಗಳೂರು ನಗರ ಸೇರಿ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಆವರಿಸಿರುವ ಮಾನ್ಸೂನ್​, 2-3 ದಿನಗಳಲ್ಲಿ ಉತ್ತರ ಕರ್ನಾಟಕವನ್ನು ವ್ಯಾಪಿಸಲಿದೆ.
ಹಾಸನ, ಚಿಕ್ಕಮಗಳೂರು, ಮಂಡ್ಯ, ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಸೋಮವಾರ ಭರ್ಜರಿ ವರ್ಷಧಾರೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮುಂದಿನ ಐದು ದಿನ ಹಾಗೂ ಬೆಂಗಳೂರು, ಬೆಂ.ಗ್ರಾಮಾಂತರ, ಹಾಸನ, ಚಿಕ್ಕಮಗಳೂರು,ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಜೂ 4ರಿಂದ ಜೂ 7ರವರೆಗೆ ಗುಡುಗು ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ. ವಿಜಯಪುರ, ಬಳ್ಳಾರಿಯಲ್ಲಿ ಜೂ 4ರಂದು ಹಾಗೂ ರಾಯಚೂರು, ಯಾದಗಿರಿ, ಕೋಲಾರ ಜೂ 5ರಂದು ಯೆಲ್ಲೋ ಅರ್ಲಟ್​ ಇರಲಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
ಮಾನ್ಸೂನ್​ ಪ್ರವೇಶ ಮೂನ್ಸೂಚನೆ ಸಿಕ್ಕಿದ ಬಳಿಕ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಈಗಾಗಲೇ ಕೆಲವಡೆ ಮಳೆ ಸುರಿದಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಜತೆಗೆ ಬಿರು ಗಾಳಿ ಜಾಸ್ತಿ ಇರಲಿದೆ. ಒಳನಾಡಿನಲ್ಲಿ ಮುಂದಿನ 48 ಗಂಟೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 2&3 ಡಿ.ಸೆ. ಉಷ್ಣಾಂಶ ಇಳಿಮುಖವಾಗಲಿದೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.
ಬಿರುಗಾಳಿ ಸಹಿತ ಮಳೆಗೆ ಬೆಂಗಳೂರು ತತ್ತರ
ಮೂರು ದಿನದಲ್ಲಿ ಅಧಿಕ ಮಳೆ:ರಾಜ್ಯಾದ್ಯಂತ ಜೂ 1ರಿಂದ ಜೂ 3ರವರೆಗೆ ವಾಡಿಕೆಯಂತೆ 12 ಮಿಮೀ ಮಳೆಯಾಗಬೇಕಿತ್ತು. ಆದರೆ, 22 ಮಿಮೀ ಸುರಿದಿದ್ದು, ವಾಡಿಕೆಗಿಂತ ಶೇ.82ರಷ್ಟು ಅಧಿಕವಾಗಿ ಸುರಿದಿದೆ.ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರಮಾಣದಲ್ಲಿ ವರ್ಷಧಾರೆಯಾದರೆ, ಮಲೆನಾಡು, ಕರಾವಳಿಯಲ್ಲಿ ವಾಡಿಕೆಗಿಂತ ತುಸು ಕಡಿಮೆ ಸುರಿದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 18 =
Remember me
