ಧಾರವಾಡ:ಮುಂಗಾರು ಮಳೆ ವಿಳಂಬವಾದರೆ ಮೋಡ ಬಿತ್ತನೆ ಮಾಡಲು ರಾಜ್ಯ ಸರ್ಕಾರ ಚಿಂತಿಸಿದೆ ಎಂಬ ಬಗ್ಗೆ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಸುಳಿವು ನೀಡಿದ್ದಾರೆ.
ಧಾರವಾಡ ಕೃಷಿ ವಿವಿ ಘಟಿಕೋತ್ಸವದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ಮುಂಗಾರು ಮಳೆ ತಡವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.30ರಷ್ಟು ಮಳೆ ಕಡಿಮೆಯಾಗಿದೆ. ಒಂದು ವಾರದಿಂದ ಮಳೆ ನಿರೀಕ್ಷೆ ಮಾಡುತ್ತಿದ್ದು, ತಡವಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಇಂದಿರಾ ಕ್ಯಾಂಟೀನ್ ಯೋಜನೆ ಮತ್ತೆ ಆರಂಭಿಸಲು ಸಿಎಂ ಸೂಚನೆ
ಮುಂಗಾರು ವಿಳಂಬದಿಂದ ಕೃಷಿ ಚಟುವಟಿಕೆ ಆರಂಭಿಸಲು ಹಿಂದೇಟು ಹಾಕುವಂತಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹ ಮಾಡಿಟ್ಟುಕೊಂಡಿದ್ದು, ಮುಂದಿನ ಎರಡು ದಿನ ಕಾದು ನೋಡುತ್ತೇವೆ. ಒಂದು ವೇಳೆ ಮೂರು ದಿನಗಳ ಒಳಗಾಗಿ ಮಳೆಯಾಗದಿದ್ದರೆ ಮೋಡ ಬಿತ್ತನೆ ಮಾಡಲು ಚಿಂತನೆ ನಡೆಸುತ್ತೇವೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.
ಜೂನ್ ತಿಂಗಳು ಆರಂಭವಾದರೂ ಸರಿಯಾದ ಪ್ರಮಾಣದಲ್ಲಿ ಮಳೆ ಆಗದಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಗುರುವಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ, ಮೋಡ ಬಿತ್ತನೆ ಮಾಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
