ಬೆಂಗಳೂರು:ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು ಮಳೆ, ಮುಂದಿನ 4 ದಿನ ಮುಂದುವರಿಯಲಿದೆ. ಬೆಂಗಳೂರು, ಬೆಳಗಾವಿ, ತುಮಕೂರು, ಹಾಸನ, ಮೈಸೂರು ಸೇರಿ ವಿವಿಧ ಭಾಗಗಳಲ್ಲಿ ಬುಧವಾರ ಭರ್ಜರಿ ವರ್ಷಧಾರೆಯಾಗಿದ್ದು, ಇಳೆಗೆ ತಂಪೆರೆದಿದೆ. ಭಾನುವಾರ ( ಜೂ 2) ರಾಜ್ಯಕ್ಕೆ ಪ್ರವೇಶಿಸಿದ್ದ ನೈಋತ್ಯ ಮಾನ್ಸೂನ್​ ರಾಜ್ಯಾದ್ಯಂತ ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸೇರಿ ರಾಜ್ಯಾದ್ಯಂತ ಮಳೆ ಬಿರುಸಾಗಿ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರದಲ್ಲಿ ಜೂ 6ರಿಂದ ರಿಂದ ಜೂ 8ರವರೆಗೆ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ ಎರಡು ದಿನ ಹಾಗೂ ದಣ ಕನ್ನಡ, ಗದಗ, ಹಾಸನ, ಬಳ್ಳಾರಿಯಲ್ಲಿ ಜೂ 6ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ. ಮೈಸೂರು, ದಾವಣಗೆರೆಯಲ್ಲಿ ಜೂ 7ರಂದು, ಉಡುಪಿ, ದಣ ಕನ್ನಡ, ಉತ್ತರ ಕನ್ನಡ ಜೂ 10ರಂದು ಯೆಲ್ಲೋ ಅರ್ಲಟ್​ ಇರಲಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
ಬಿಜೆಪಿ ವಿರುದ್ಧ ಕಾಂಗ್ರೆಸ್‌ನ ಮತಗಳಿಕೆ ಪ್ರಮಾಣ ಎಷ್ಟು? ಇಲ್ಲಿದೆ ಮಾಹಿತಿ..
ಉಷ್ಣಾಂಶ ಕುಸಿತ:ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತವಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸರಾಸರಿ 35&36 ಡಿ.ಸೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 30-32 ಅಸುಪಾಸಿನಲ್ಲಿ ತಾಪಮಾನ ದಾಖಲಾಗುತ್ತಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ 30 ಡಿ.ಸೆ.ದೊಳಗೆ ಕಂಡುಬರುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 2 =
Remember me
