ಬೆಂಗಳೂರು:ಈ ಬಾರಿ ನೈಋತ್ಯ ಮಾನ್ಸೂನ್​( ಮುಂಗಾರು ಮಳೆ) ಗುರುವಾರ ಕೇರಳಕ್ಕೆ ಪ್ರವೇಶಿಸಲಿದೆ. ಮೇ 31 ಅಥವಾ ಜೂ 1ರಂದು ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೂನ್ಸೂಚನೆ ಕೊಟ್ಟಿದೆ.
ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪದಿಂದ ಮೇ 19ರಿಂದ ಮಾನ್ಸೂನ್​ ಆರಂಭವಾಗಿತ್ತು. ಪೂರಕ ವಾತಾವರಣ ಇರುವುದು,ಮಾರುತಗಳು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ವ್ಯಾಪಿಸಿರುವ ಮಾನ್ಸೂನ್​ ಕೇರಳದ ಸಮೀಪದಲ್ಲಿದೆ. ಮುಂದಿನ 24 ಗಂಟೆ ಕೇರಳದ ಕರಾವಳಿಗೆ ಆಗಮಿಸಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಈ ವರ್ಷ “ಎಲ್​ ನಿನೋ’ ದುರ್ಬಲಗೊಂಡು “ಲಾ-ನಿನಾ’ ಉಂಟಾಗಲಿದೆ. “ರಿಮಾಲ್​’ ಚಂಡಮಾರುತದಿಂದ ನೈಋತ್ಯ ಮಾನ್ಸೂನ್​ ಮೇಲೆ ಅಷ್ಟೇನೂ ಪರಿಣಾಮ ಬೀರಿಲ್ಲ. ಮಾನ್ಸೂನ್​ ವ್ಯಾಪಿಸಲು ಪರಿಸ್ಥಿತಿ ಅನುಕೂಲವಾಗಿದೆ. ಈ ಎಲ್ಲ ಕಾರಣಗಳಿಂದ ಈ ಬಾರಿ ವಾಡಿಕೆಯಂತೆ ಕೇರಳಕ್ಕೆ ಮಾನ್ಸೂನ್​ ಪ್ರವೇಶಿಸಲಿದೆ. ನಂತರ, ಒಂದರೆಡು ದಿನಗಳಲ್ಲಿ ಕರ್ನಾಟಕದ ಕರಾವಳಿ ಭಾಗಕ್ಕೆ ಆಗಮಿಸಲಿದೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ. ಕಳೆದ ವರ್ಷ “ಎಲ್​ ನಿನೋ’ ಪರಿಣಾಮದಿಂದಾಗಿ ಮಳೆ ಕೊರತೆಯಾಗಿತ್ತು. ಈ ಬಾರಿ ಅದು ದುರ್ಬಲಗೊಂಡಿದೆ. ಜೂನ್​ನಿಂದ ಸೆಪ್ಟೆಂಬರ್​ವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಕರ್ನಾಟಕದಲ್ಲಿಯೂ ವಾಡಿಕೆಗಿಂತ ತುಸು ಹೆಚ್ಚು ಮಳೆ ಸುರಿಯಲಿದೆ. ಜೂನ್​ನಲ್ಲಿ ದಣ ಭಾರತ ಸೇರಿ ದೇಶಾದ್ಯಂತ ವಾಡಿಕೆಯಷ್ಟೇ ಬೀಳಲಿದೆ ಎಂದರು.
ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್​ ರೇವಣ್ಣಗೆ ಎದುರಾಯ್ತು ಮತ್ತೊಂದು ಸಂಕಷ್ಟ
3 ದಿನ ಸಾಧಾರಣ ಮಳೆ:ರಾಜ್ಯದಲ್ಲಿ ಮುಂದಿನ 3 ದಿನ ಸಾಧಾರಣ ವರ್ಷಧಾರೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮೇ 30ರಿಂದ ಜೂ 1 ರವರೆಗೆ ಸಾಧಾರಣ ಪ್ರಮಾಣದಲ್ಲಿ ಮಳೆ ಬೀಳಲಿದೆ. ರಾಮನಗರ, ಚಾಮರಾಜನಗರದಲ್ಲಿ ಜೂ 2ರಂದು, ಚಿಕ್ಕಮಗಳೂರು, ಕೊಡಗು, ಮೈಸೂರಿನಲ್ಲಿ ಜೂ 3 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 18 =
Remember me
