ಬೆಂಗಳೂರು:ಮುಂಗಾರು ಮಾರುತಗಳು ದುರ್ಬಲಗೊಂಡ ಪರಿಣಾಮ ಮುಂದಿನ ಐದು ದಿನ ರಾಜ್ಯದಲ್ಲಿ ಸಾಧಾರಣ ಮಳೆ ಬೀಳಲಿದೆ. ಬುಧವಾರವೂ ದಕ್ಷಿಣ ಕನ್ನಡ ಸೇರಿ ರಾಜ್ಯದ ಕೆಲವಡೆ ಮಾತ್ರ ಮಳೆ ಸುರಿದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಕೋಲಾರದಲ್ಲಿ ಜೂ 15ರಿಂದ ಜೂ 19ರವರೆಗೆ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರಿನಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:ಉನ್ನತ ವಿದ್ಯಾಭ್ಯಾಸಕ್ಕೆಂದು ಲಂಡನ್​ಗೆ ಹೋದ ಭಾರತೀಯ ಯುವತಿಯ ಹತ್ಯೆ!
ಬಿಪರ್‌ಜಾಯ್ ಚಂಡಮಾರುತವು ತೇವಾಂಶ ಭರಿತ ಮೋಡಗಳನ್ನು ಸೆಳೆದುಕೊಂಡ ಕಾರಣಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದ ಮಾರುತಗಳು ದುರ್ಬಲಗೊಂಡಿವೆ. ಇದರಿಂದಾಗಿ ರಾಜ್ಯಾದ್ಯಂತ ಆವರಿಸಲು ಇನ್ನೂ ಸಮಯ ಬೇಕಾಗಲಿದೆ. ಚಂಡಮಾರುತ ಮುಗಿದ ಬಳಿಕ ಮುಂದಿನ ಒಂದು ವಾರದಲ್ಲಿ ಅರಬ್ಬಿ ಸಮುದ್ರದಲ್ಲಿ ಮಾರುತಗಳ ಸೃಷ್ಟಿಗೆ ಪೂರಕ ವಾತಾವರಣ ಉಂಟಾಗುವ ಸಾಧ್ಯತೆ ಇದೆ. ಬಳಿಕ, ಮಾರುತಗಳು ಚುರುಕುಗೊಂಡು ರಾಜ್ಯಾದ್ಯಂತ ವ್ಯಾಪಿಸುವ ಜತೆಗೆ ಉತ್ತಮ ಮಳೆ ತರುವ ನಿರೀಕ್ಷೆ ಇದೆ ಎನ್ನುತ್ತಾರೆ ಹವಾಮಾನ ತಜ್ಞರು.
ಇದನ್ನೂ ಓದಿ:ಅತ್ತೆಯನ್ನೇ ಕೊಂದಳಾ ಸೊಸೆ?; ಬೇರೆ ಮನೆ ಮಾಡುವಂತೆ ಗಂಡನಿಗೆ ಕಿರುಕುಳ ಕೊಡುತ್ತಿದ್ದ ಆರೋಪ
ಮೂರ್ನಾಲ್ಕು ವರ್ಷಗಳಿಂದ ಮಳೆ ದಿನಗಳು ಬದಲಾಗುತ್ತಿರುವ ಕಾರಣ 2020 ಮತ್ತು 2022ರ ಜೂನ್‌ನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ. 2021ರ ಜೂನ್‌ನಲ್ಲಿ ಮಾತ್ರ ವಾಡಿಕೆಯಷ್ಟೇ ಮಳೆ ಸುರಿದಿದೆ. ಆದರೆ, ಮೂರು ವರ್ಷಗಳಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕುಂಠಿತವಾಗುತ್ತಿದೆ. ಹೀಗಾಗಿ, ಆ ಭಾಗದ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ:ಆತಂಕದಲ್ಲೇ ಬದುಕುತ್ತಿದ್ದ ಅಜ್ಜಿಗಾಗಿ ಹೊಸ ಮನೆ; ದಾನಿಗಳ ಸಹಕಾರದಲ್ಲಿ ನಿರ್ಮಾಣ, ನಾಳೆಯೇ ಗೃಹಪ್ರವೇಶ
ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆ ಸುರಿದಿದ್ದರೂ ಸರಿಯಾಗಿ ಸಮಯಕ್ಕೆ ಮಳೆ ಬರುತ್ತಿಲ್ಲ. ದಿನದಲ್ಲಿ ಬೀಳುವ ಮಳೆ ಗಂಟೆಗೆ, ವಾರಕ್ಕೆ ಬೀಳುವ ಮಳೆ ದಿನಕ್ಕೆ, ತಿಂಗಳಲ್ಲಿ ಬೀಳುವ ಮಳೆ ವಾರದಲ್ಲಿ ಬೀಳುವಂತಾಗಿದೆ. ಇದಕ್ಕೆ ಹವಾಮಾನ ವೈಪರೀತ್ಯವೇ ಪ್ರಮುಖ ಕಾರಣವಾಗಿದೆ.
ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..

ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + one =
Remember me
