ಬೆಂಗಳೂರು :ವಾಡಿಕೆಯಂತೆ ಶುಕ್ರವಾರ(ಜೂನ್ 4) ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿವೆ. ಗುರುವಾರ ಕೇರಳಕ್ಕೆ ಆಗಮಿಸಿದ್ದ ಮಾರುತಗಳು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಕಾಲಿಟ್ಟಿವೆ. ಬೆಂಗಳೂರು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ವರ್ಷಧಾರೆಯಾಗಿದೆ.
ಕಳೆದ ವರ್ಷ ಜೂ.6 ರಂದು ರಾಜ್ಯವನ್ನು ಮುಂಗಾರು ಪ್ರವೇಶಿಸಿತ್ತು. ಅದಕ್ಕೂ ಹಿಂದಿನ ವರ್ಷದಲ್ಲಿ ಮೇ ಕೊನೆಯ ದಿನದಲ್ಲಿ ಆಗಮಿಸಿತ್ತು. ರಾಜಾದ್ಯಂತ ಮಾರುತಗಳು ವ್ಯಾಪಿಸಲು ಮೂರ್ನಾಲ್ಕು ದಿನಗಳು ಬೇಕಾಗಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರೆಡ್​ ಅರ್ಲಟ್​:ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಜೂ.5 ರಂದು ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ರೆಡ್​ ಅರ್ಲಟ್​ ಘೋಷಿಸಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ಆರೆಂಜ್​ ಅರ್ಲಟ್​ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ. ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್​, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಮತ್ತು ವಿಜಯಪುರದಲ್ಲಿ ಜೂ.5 ರಂದು ಯೆಲ್ಲೋ ಅರ್ಲಟ್​ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬಿಬಿಎಂಪಿ ಕಮಿಷನರ್ ಟ್ವಿಟರ್​ ಖಾತೆ ಹ್ಯಾಕ್!

ಮಧ್ಯಪ್ರದೇಶದಲ್ಲಿ 3,000 ಕಿರಿಯ ವೈದ್ಯರ ರಾಜೀನಾಮೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 3 =
Remember me
