ಬೆಂಗಳೂರು:ಕಲಾವಿದರಿಗೆ ನೀಡಲಾಗುತ್ತಿರುವ ಮಾಸಾಶನವನ್ನು ಮೂರು ಸಾವಿರಕ್ಕೆ ಹೆಚ್ಚಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಿದೆ.
ಪ್ರಸ್ತುತ 60 ವರ್ಷ ಮೀರಿದ 13 ಸಾವಿರ ಕಲಾವಿದರಿಗೆ ಮಾಸಿಕ ಎರಡು ಸಾವಿರ ರೂ. ಮಾಸಾಶನ ನೀಡಲಾಗುತ್ತಿದ್ದು, ಈ ಮೊತ್ತವನ್ನು ಮೂರು ಸಾವಿರಕ್ಕೆ ಹೆಚ್ಚಿಸುವಂತೆ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಆದರೆ ಈವರೆಗೆ ಕ್ರಮ ಕೈಗೊಂಡಿರಲಿಲ್ಲ. ಇದೀಗ ಸಚಿವ ಶಿವರಾಜ ತಂಡಗಡಿ ಅವರು ಹಲವು ಸುತ್ತಿನ ಸಭೆ ನಡೆಸಿ, ಮಾಸಾಶನ ಹೆಚ್ಚಳಕ್ಕೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಚಿವರ ಸೂಚನೆ ಮೇರೆಗೆ ಅಧಿಕಾರಿಗಳು ಪ್ರಸ್ತಾವನೆ ಸಿದ್ದಪಡಿಸಿ, ಇಲಾಖೆ ಕಾರ್ಯದರ್ಶಿಗಳಿಗೆ ಕಡತ ಸಲ್ಲಿಸಿದ್ದರು. ಆದರೆ, ಮಾಸಾಶನ ಹೆಚ್ಚಳಕ್ಕೆ ಹೆಚ್ಚುವರಿ ಮೊತ್ತ ಸೇರಿ ಇನ್ನಿತರ ಮಾಹಿತಿಗಳನ್ನು ಉಲ್ಲೇಖಿಸಿ ಮತ್ತೊಮ್ಮೆ ಕಡತ ಸಲ್ಲಿಸುವಂತೆ ಸೂಚಿಸಿ ಇಲಾಖೆಗೆ ವಾಪಸ್ ಕಳುಹಿಸಲಾಗಿದೆ.ಅದರಂತೆ ಹೆಚ್ಚುವರಿ ಮಾಹಿತಿಯನ್ನು ಉಲ್ಲೇಖಿಸಿ ಇನ್ನೆರಡು ದಿನಗಳಲ್ಲಿ ಇಲಾಖೆ ವತಿಯಿಂದ ಮತ್ತೊಮ್ಮೆ ಕಡತ ಸಲ್ಲಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − eight =
Remember me
