ಬೆಂಗಳೂರು:ಗೃಹ ಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ ಎಂದರು.ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಗಾಗಿ ಮುಂದೂಡಲಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದು, ಅವರ ದಿನಾಂಕಕ್ಕೆ ಹೊಂದಾಣಿಕೆ ದೃಷ್ಟಿಯಿಂದ ಸ್ಥಳ ಬದಲಾವಣೆ ಮಾಡಲಾಗಿದೆ ಎಂದರು.ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾರಣ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಸಂಘಟಿಸಲು ನಿರ್ಧರಿಸಿದ್ದು, ಈಗಾಗಲೇ ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿಯೇ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ಸಚಿವರು ಪ್ರಶ್ನಯೊಂದಕ್ಕೆ ಉತ್ತರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
