ಬೆಂಗಳೂರು:ಭಾರಿ ಮಳೆ ಹಾಗೂ ಪ್ರವಾಹ ಬಾಧಿತ ಪ್ರದೇಶಗಳಲ್ಲಿನ ಜನ-ಜಾನುವಾರು ಸುರಕ್ಷತೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.ಸಿಎಂ ಗೃಹ ಕಚೇರಿ’ ಕೃಷ್ಣಾ’ದಲ್ಲಿ ಮಳೆ ಹಾನಿ ಕುರಿತು ಡಿಸಿ, ಜಿ.ಪಂ. ಸಿಇಒ ಹಾಗೂ ಎಸ್ಪಿಗಳೊಂದಿಗೆ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್ ಸಭೆ ಆರಂಭವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್, ಕಂದಾಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.ಮಳೆ ಹಾನಿ ಮಾಹಿತಿ ಪಡೆಯುವ ಮುನ್ನ ಬಿಎಸ್ ವೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಳೆ ಅನಾಹುತ ಸಂಭವಿಸಿದ ಜಿಲ್ಲೆಗಳಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪ್ರವಾಸ ಮಾಡುತ್ತಿದ್ದಾರೆ. ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಹೆಚ್ಚಿನ ಮುತುವರ್ಜಿಯಿಂದ ಕೆಲಸ ನಿರ್ವಹಿಸುತ್ತಿದ್ದು, ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಚುರುಕಾಗಿ ಕಾರ್ಯತತ್ಪರಾಗಿ, ಜಾನುವಾರುಗಳ ರಕ್ಷಣೆಯೊಂದಿಗೆ ಮೇವಿನ ವ್ಯವಸ್ಥೆ ಮಾಡಬೇಕು.
ತುರ್ತು ಕ್ರಮಗಳಿಗೆ ಬೇಕಾದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಹಾಗೂ ಎಲ್ಲ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಲಭ್ಯವಿರುವ ಒಟ್ಟು 800 ಕೋಟಿ ರೂ. ಗಳನ್ನು ಬಳಸಿಕೊಂಡು, ಯುದ್ಧೋಪಾದಿ ಕೆಲಸ ನಿರ್ವಹಿಸಿರಿ. ಮಾನವೀಯತೆ, ದಕ್ಷತೆ ಹಾಗೂ ಪಾರದರ್ಶಕವಾಗಿ ಪರಿಹಾರ, ಇನ್ನಿತರ ಕೆಲಸಗಳನ್ನು ನಿಭಾಯಿಸಬೇಕು. ನೊಂದವರ ನೋವಿಗೆ ಮಿಡಿಯಬೇಕು. ಪ್ರತಿಯೊಂದು ಕೆಲಸದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದುವರಿಯಿರಿ ಎಂದು ಬಿಎಸ್ ವೈ ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
