ಬೆಂಗಳೂರು:ವಾರಾಂತ್ಯದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಕನಿಷ್ಠ ಎರಡು ಸಾವಿರ ವೈದ್ಯರು ಹೆಚ್ಚುವರಿಯಾಗಿ ಲಭ್ಯರಾಗಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಒಂದೆರಡು ದಿನಗಳಲ್ಲಿ ಸ್ನಾತಕ, ಸ್ನಾತಕೋತ್ತರ ವೈದ್ಯ ಪದವಿ ಫಲಿತಾಂಶ ಪ್ರಕಟವಾಗಲಿದ್ದು ಬಳಿಕ ಇಂಟರ್ನಿ ವಿದ್ಯಾರ್ಥಿಗಳು ಕರೋನಾ ಸೋಂಕಿತರ ಚಿಕಿತ್ಸೆ ನೀಡಲು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕೆಂಗೇರಿ ಸಮೀಪದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್- 19 ಪ್ರಯೋಗಾಲಯ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇದನ್ನೂ ಓದಿ;ಶಾಲಾ ಶುಲ್ಕ, ಹೋಟೆಲ್​, ವಿದ್ಯುತ್​ ಬಿಲ್ ಪಾವತಿ ಮೇಲೂ ತೆರಿಗೆ ಅಧಿಕಾರಿಗಳ ನಿಗಾ; ಹೆಚ್ಚು ಮೊತ್ತದ ವಹಿವಾಟಿಗೆ ನೀಡಬೇಕು ಲೆಕ್ಕ
ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತವು ಅಮೆರಿಕದಂಥ ಮುಂದುವರಿದ ರಾಷ್ಟ್ರಗಳಿಗಿಂತ ಉತ್ತಮ ಸಾಧನೆ ಮಾಡಿದೆ. ಆ ದೇಶಗಳಿಗಿಂತ ಸೌಲಭ್ಯಗಳ ಕೊರತೆ ಇದ್ದರೂ ಮರಣ ಪ್ರಮಾಣ ನಮ್ಮಲ್ಲಿ ಕಡಿಮೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಇದಕ್ಕೆ ಕಾರಣ ಎಂದರು.ವೈದ್ಯರಿಂದ ಜನರು ಹೆಚ್ಚಿನದನ್ನು ನಿರೀಕ್ಷಿಸುತ್ತಿದ್ದಾರೆ. ಇದೊಂದು ಪವಿತ್ರ ಹೊಣೆಗಾರಿಕೆಯಿರುವ ವೃತ್ತಿಯಾಗಿದ್ದು, ಭವಿಷ್ಯದಲ್ಲಿ ಇದರ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ವೈದ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಆದಿಚುಂಚನಗಿರಿ ಮಠ ದೇಶಾದ್ಯಂತ ಐದುನೂರಕ್ಕೂ ಹೆಚ್ಚು ಸಂಸ್ಥೆಗಳ ಮೂಲಕ ಅಕ್ಷರ, ಅನ್ನ ಮತ್ತು ಆರೋಗ್ಯ ದಾಸೋಹ ನಡೆಸುತ್ತಿದೆ. ನೂರಾರು ಮಂದಿಗೆ ಆಶ್ರಯ ನೀಡಿರುವ ಜತೆಗೆ ಲಕ್ಷಾಂತರ ಮಂದಿಯ ಭವಿಷ್ಯ ರೂಪಿಸುವ ಕಾರ್ಯ ನಿರಂತರವಾಗಿ ನಡೆದುಕೊಂಡು ಬಂದಿರುವುದು ಶ್ಲಾಘನೀಯ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ದೂರದರ್ಶಿತ್ವ ಮತ್ತು ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಪರಿಶ್ರಮ ಈ ಶ್ರೇಯಕ್ಕೆ ಕಾರಣ ಎಂದರು.
ಇದನ್ನೂ ಓದಿ;ಎರಡೇ ವಾರದಲ್ಲಿ 97 ಸಾವಿರ ಮಕ್ಕಳಲ್ಲಿ ಸೋಂಕು; ಶಾಲೆಗಳ ಮರು ಆರಂಭ ನಿರ್ಧಾರ ಹುಟ್ಟು ಹಾಕಿದೆ ಭಾರಿ ಚರ್ಚೆ
ಬಿಜಿಎಸ್ ಗ್ಲೋಬಲ್ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್​ನ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶನಾಥ ಸ್ವಾಮೀಜಿ, ಆರೋಗ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಬಿ.ಸಿ. ಭಗವಾನ್ ಮತ್ತು ಕಾಲೇಜಿನ ಪ್ರಾಂಶುಪಾಲ ಡಾ.ಮೋಹನ್ ಮತ್ತಿತರರು ಭಾಗವಹಿಸಿದ್ದರು.
ಭಾರತೀಯರಿಗೆ ಶುಭಸುದ್ದಿ; ದೇಶೀಯ ಕರೊನಾ ಲಸಿಕೆ ಕೊವಾಕ್ಸಿನ್​ ಮಾನವರ ಬಳಕೆಗೆ ಸುರಕ್ಷಿತ; ಆರಂಭಿಕ ಯಶಸ್ಸು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + thirteen =
Remember me
