ನವದೆಹಲಿ:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುತ್ತಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಮಹಿಳೆಯರಿಗೆ 3 ಲಕ್ಷ ಕೋಟಿಗೂ ಹೆಚ್ಚು ಅನುದಾನ ನೀಡಿದ್ದಾರೆ.
ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ ಬಜೆಟ್​​ನಲ್ಲಿ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ವಿನಿಯೋಗಿಸಿದೆ ಎಂದು ಹಣಕಾಸು ಸಚಿವರು ಹೇಳಿದರು.
ಕೈಗಾರಿಕಾ ಕಾರ್ಮಿಕರಿಗೆ ವಸತಿ ನಿಲಯದ ಸೌಲಭ್ಯ ಸಿಗಲಿದೆ. ಆಂಧ್ರಪ್ರದೇಶದ ಮೂರು ಜಿಲ್ಲೆಗಳಿಗೆ ಹಿಂದುಳಿದ ಪ್ರದೇಶಗಳ ಅನುದಾನವನ್ನು ಒದಗಿಸಲಾಗುವುದು. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್​ಗಳನ್ನು ನಿರ್ಮಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರವು ವರ್ಕಿಂಗ್ ವುಮನ್ ಹಾಸ್ಟೆಲ್‌ಗಳನ್ನು ಸ್ಥಾಪಿಸುತ್ತದೆ. ನಿರ್ಮಲಾ ಸೀತಾರಾಮನ್ ಉದ್ಯೋಗ, ಕೌಶಲ್ಯ, MSME ಗಳು ಮತ್ತು ಮಧ್ಯಮ ವರ್ಗದ ಮೇಲೆ ಈ ಬಾರಿಯ ಬಜೆಟ್ ಕೇಂದ್ರೀಕರಿಸುತ್ತದೆ.
ಮಧ್ಯಂತರ ಬಜೆಟ್‌ನಲ್ಲಿ ಉಲ್ಲೇಖಿಸಿರುವಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಕೇಂದ್ರೀಕರಿಸಬೇಕಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಸುಂಕ ತೆರವು; ಮೊಬೈಲ್ ಮತ್ತು​ ಚಾರ್ಜರ್​ಗಳ ಮೇಲಿನ ತೆರಿಗೆ ಇಳಿಕೆ
ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಸುಂಕ ತೆರವು; ಮೊಬೈಲ್ ಮತ್ತು​ ಚಾರ್ಜರ್​ಗಳ ಮೇಲಿನ ತೆರಿಗೆ ಇಳಿಕೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:17 + 8 =
Remember me
