ಮೈಸೂರು:ರಾಜ್ಯದಲ್ಲಿ ಇಂದೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಅಪಘಾತದಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಆ ಪೈಕಿ ಕೆಲವರ ಪರಿಸ್ಥಿತಿ ಗಂಭೀರವಾಗಿದೆ. ಮೈಸೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಬಳಿ ಹಾಸನ‌-ಮೈಸೂರು ಹೆದ್ದಾರಿಯಲ್ಲಿ ಬಸ್ ಮತ್ತು ಕ್ಯಾಂಟರ್ ಮುಖಾಮುಖಿಯಾಗಿ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಅನೇಕ ‌ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ತಾಲೂಕು ಹಾಗೂ‌ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿಯಾದ ರಭಸಕ್ಕೆ ಬಸ್ ಹಾಗೂ ಕ್ಯಾಂಟರ್ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಧಾವಿಸಿ ಅಗತ್ಯ ಕ್ರಮಕೈಗೊಂಡಿದ್ದಾರೆ.
ಕಾಡುದಾರಿ, ಹೆರಿಗೆ ಬೇನೆ; ಆ್ಯಂಬುಲೆನ್ಸ್​ಗೇ ಅಡ್ಡ ಬಂದ ಆನೆ!; ಆಪರೇಷನ್​ ಗಜ-ಪ್ರಸವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 13 =
Remember me
