ರಾಯಚೂರು:ಕಳಪೆ ಗುಣಮಟ್ಟದ ಆಹಾರ ಸೇವಿಸಿದ ಪರಿಣಾಮ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.
ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು, ವಸತಿ ನಿಲಯದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ವಸತಿ ನಿಲಯದ ಸಿಬ್ಬಂದಿಯೊಬ್ಬರು, ಬೆಳಗಿನ ತಿಂಡಿಗೆ ಇಡ್ಲಿ-ಚಟ್ನಿ ನೀಡಲಾಗಿತ್ತು. ಮಧ್ಯಾಹ್ನದ ಊಟಕ್ಕೆ ಅನ್ನ-ಸಾಂಬಾರ್​ ಕೊಡಲಾಗಿತ್ತು. ರಾತ್ರಿ 08 ಗಂಟೆ ಸುಮಾರಿಗೆ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಮಕ್ಕಳ ಹಾಗೂ ಆಹಾರದ ಮಾದರಿಗಳನ್ನು ಸಂಗ್ರಹಿಸಿದ್ದು, ಲ್ಯಾಬ್​ ರಿಪೋರ್ಟ್​ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ನಿಲಯದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 11 =
Remember me
