ಚಿಕ್ಕಬಳ್ಳಾಪುರ:ಜಗತ್ತಿನಾದ್ಯಂತ ಮಹಿಳೆಯರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂತೋಷ-ಸಂಭ್ರಮದಲ್ಲಿದ್ದರೆ ಇಲ್ಲೊಬ್ಬ ತಾಯಿ ಹಾಗೂ ಮಗಳು ದುರಂತ ಅಂತ್ಯ ಕಂಡಿದ್ದಾರೆ. ಅಷ್ಟಕ್ಕೂ ಕ್ಷುಲ್ಲಕ ಕಾರಣವೊಂದಕ್ಕೆ ಕೊಲೆ ಹಾಗೂ ಆತ್ಮಹತ್ಯೆ ಎರಡೂ ನಡೆದುಹೋಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಊದುತಿ ಗ್ರಾಮದ ನಿವಾಸಿ ರಾಧಾ (28) ಎಂಬಾಕೆ ತನ್ನ ಎರಡು ವರ್ಷದ ಮಗಳನ್ನು ಕೊಂದುಹಾಕಿ ಕೊನೆಗೆ ತಾನೂ ಆತ್ಯಹತ್ಯೆ ಮಾಡಿಕೊಂಡಿದ್ದಾಳೆ. ಗಂಡ ಹಾಗೂ ಅತ್ತೆ ಬೈದರು ಎಂಬ ಕಾರಣಕ್ಕೆ ಈ ತಾಯಿ ಇಂಥದ್ದೊಂದು ನಿರ್ಧಾರ ತೆಗೆದುಕೊಂಡಿದ್ದಾಳೆ ಎನ್ನಲಾಗಿದೆ.
ಗೌರಿಬಿದನೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅತ್ತೆ ಅಶ್ವತ್ಥಮ್ಮ ಹಾಗೂ ಗಂಡ ಮಂಜುನಾಥ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದವನಿಗೆ 10 ವರ್ಷ ಜೈಲು; ಒಬ್ಬನ ಮೇಲೆಯೇ 21 ಪೋಕ್ಸೋ ಪ್ರಕರಣಗಳು

‘ಕಾಲೂರಲು’ ಸಿಗದ ‘ಬೆಂ’ಬಲ; ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + one =
Remember me
